

ಆಂಧ್ರಪ್ರದೇಶ: 'ಜವಾನ್' ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ನಿರ್ದೇಶಕ ಅಟ್ಲಿ ಕುಮಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ.
ಇದನ್ನೂ ಓದಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಅರ್ಜಿ ಆಹ್ವಾನ
ಸದ್ಯ ಶಾರೂಖ್ ಖಾನ್ ನಟನೆಯ ಚಿತ್ರವು ಇಂದು ದೇಶಾದ್ಯಂತ ಬಿಡುಗಡೆಗೊಳ್ಳುವ ಮೂಲಕ ಅಟ್ಲಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಈ ಬೆನ್ನಲ್ಲೇ ಸಿನಿಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಕೊಡಲು ನಿರ್ದೇಶಕರು ಮುಂದಾಗಿದ್ದಾರೆ ಎಂದು ಇತ್ತೀಚಿನ ವರದಿಯೊಂದು ತಿಳಿಸಿದೆ.
ತಮಿಳು ಚಿತ್ರ ನಿರ್ಮಾಪಕ ಅಟ್ಲಿ ಕಳೆದ ಕೆಲವು ತಿಂಗಳುಗಳಿಂದ ಬಾಲಿವುಡ್ ಸಿನಿಪ್ರೇಕ್ಷಕರು ಮತ್ತು ಎಸ್ಆರ್ಕೆ ಅಭಿಮಾನಿಗಳ ಗಮನವನ್ನು ಸೆಳೆದಿದ್ದು, 'ಜವಾನ್' ಬಿಡುಗಡೆಯ ನಂತರ ಪ್ರೇಕ್ಷಕರಲ್ಲಿ ಹೊಸ ಅಭಿಪ್ರಾಯವನ್ನೇ ಮೂಡಿಸಿದ್ದಾರೆ. ಸದ್ಯದ ವರದಿಗಳ ಪ್ರಕಾರ, ರಾಷ್ಟ್ರ ಪ್ರಶಸ್ತಿ ವಿಜೇತ, ಟಾಲಿವುಡ್ನ ಐಕಾನ್ ಸ್ಟಾರ್, ನಟ ಅಲ್ಲು ಅರ್ಜುನ್ ಅವರೊಂದಿಗೆ ಶೀಘ್ರವೇ ಕೈಜೋಡಿಸಲಿದ್ದಾರೆ ಎಂದು ಹೇಳಲಾಗಿದೆ.
ಅಟ್ಲಿ ಮತ್ತು ಅಲ್ಲು ಅರ್ಜುನ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೊಂದು ಮೂಡಿಬರಲಿದೆ ಎಂಬ ಊಹಪೋಹಗಳು ಹಲವು ದಿನಗಳಿಂದ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ 'ಜವಾನ್' ನಿರ್ದೇಶಕ, "ಅಲ್ಲು ಅರ್ಜುನ್ ಅವರಿಗೆ ಕಥೆಯನ್ನು ಹೇಳಿದ್ದೇನೆ. ಪ್ರಸ್ತುತ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲೇ ನಿಮ್ಮೆಲ್ಲರಿಗೂ ಸಿಹಿ ಸುದ್ದಿ ನೀಡುತ್ತೇನೆ" ಎಂದು ಹೇಳಿದ್ದಾರೆ,(ಏಜೆನ್ಸೀಸ್).