ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್: ಬಿಗ್‌ಬಾಸ್ ಖ್ಯಾತಿಯ ಎಜಾಜ್ ಖಾನ್ ಬಂಧನ

Ajaj Khan
Published on

ಮುಂಬೈ: ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದಕ್ಕಾಗಿ ಬಿಗ್‌ಬಾಸ್-7 ಖ್ಯಾತಿಯ ನಟ ಎಜಾಜ್ ಖಾನ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಫೇಸ್‌ಬುಕ್ ಲೈವ್ ಸೆಷನ್ ಒಂದಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ವಿಚಾರಣೆಗೆ ಕರೆಸಿದ್ದ ಖಾರ್ ಠಾಣೆ ಪೊಲೀಸರು, ನಂತರ ಅವರನ್ನು ಬಂಧಿಸಿದರು.

ಸಮುದಾಯಗಳ ನಡುವೆ ದ್ವೇಷ ಬಿತ್ತುವುದನ್ನು ನಿಷೇಧಿಸುವ 153ಎ ವಿಧಿಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಇವರನ್ನು ಬಂಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಜುಲೈನಲ್ಲಿಯೂ ಫೇಸ್‌ಬುಕ್‌ನಲ್ಲಿ ಇಂತಹುದೇ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಜಾಜ್ ಖಾನ್ ಅವರನ್ನು ಬಂಧಿಸಿದ್ದರು. 2018ರ ಅಕ್ಟೋಬರ್‌ನಲ್ಲಿ ನಿಷೇಧಿತ ಡ್ರಗ್ಸ್ ಹೊಂದಿದ್ದಕ್ಕಾಗಿ ಅವರು ಬಂಧನಕ್ಕೆ ಒಳಗಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net