

Ramayana Release Date: 2026ರ ಅತ್ಯಂತ ನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ ಮಹಾಕಾವ್ಯ ಆಧಾರಿತ ಚಿತ್ರ 'ರಾಮಾಯಣ' ಸಿನಿಮಾ ಪ್ರಪಂಚದಾದ್ಯಂತ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಇತ್ತೀಚೆಗಷ್ಟೇ ತೆರೆಕಂಡಿದ್ದ ಟ್ರೇಲರ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಚಿತ್ರತಂಡ ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ ಈ ಸಿನಿಮಾದ ಇಂಗ್ಲಿಷ್ ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ.