ಇಷ್ಟಪಟ್ಟು ಓದಲು ಕರೆ ನೀಡುತ್ತಿದೆ 'ಬನ್​ ಟೀ' ಚಿತ್ರತಂಡ; ಟ್ರೇಲರ್​ ಬಿಡುಗಡೆ

Bun Tea
Published on

ಬೆಂಗಳೂರು: 'ಕಾರ್ಮೋಡ ಸರಿದು' ಎಂಬ ಚಿತ್ರ ನಿರ್ದೇಶಿಸಿದ್ದ ಉದಯ್​ ಕುಮಾರ್​, ಈಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮುಗಿಸಿದ್ದಾರೆ. ಅದೇ 'ಬನ್​ ಟೀ'. ಈಗಾಗಲೇ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ,

ನೈಜ ಘಟನೆಯಿಂದ ಸ್ಫೂರ್ತಿ ಪಡೆದು ರೂಪಿಸಿರುವ 'ಬನ್ ಟೀ' ಸಿನಿಮಾಗೆ ಉದಯ್ ಕಥೆ ಬರೆದು ನಿರ್ದೇಶನದ ಜೊತೆಗೆ ಸಂಕಲನ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಇದು ಏಳು ವರ್ಷಗಳ ಕನಸು ಎನ್ನುವ ಉದಯ್​, 'ಸಿನಿಮಾ ಅವಕಾಶಕ್ಕಾಗಿ ಗಾಂಧಿನಗರ ಸುತ್ತುವಾಗ ಬನ್ ಟೀ ನಮ್ಮ ಊಟವಾಗಿತ್ತು. ಶೀರ್ಷಿಕೆ ವಿಭಿನ್ನವಾಗಿ ಇದ್ದರೇ ಕುತೂಹಲ ಮೂಡುತ್ತದೆ. ಹೆಸರು ಕೇಳಿದವರೆಲ್ಲ ಚೆನ್ನಾಗಿದೆ ಎನ್ನುತ್ತಿದ್ದಾರೆ. ಕಷ್ಟಪಟ್ಟು ಓದು ಅನ್ನುವ ಬದಲು ಇಟ್ಟಪಟ್ಟು ಓದು ಅನ್ನೋದನ್ನು ಯಾಕೆ ಹೇಳುವುದಿಲ್ಲ ಅನ್ನೋದೇ ಚಿತ್ರದ ಒಟ್ಟಾರೆ ಸಾರಾಂಶ' ಎಂದು ತಿಳಿಸಿರು.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, 'ಉದಯ್ ಹೇಳಿದ ಕಥೆ ಇಷ್ಟವಾಯ್ತು. ಹಂಚಿ ತಿನ್ನುವ ಅಗತ್ಯವಿರುವ ಈ ದಿನಗಳಲ್ಲಿ ಹಂಚಿ ಉಣ್ಣದೇ ಬರೀ ಬಾಚಿಕೊಳ್ಳುವ ಮನಸ್ಥಿತಿ ಹೆಚ್ಚಾಗುತ್ತಿದೆ. ಅದರಿಂದ ಉಂಟಾಗುವ ಸಾಮಾಜಿಕ ತೊಂದರೆಗಳ ಸುತ್ತ ಕಥೆ ಸಾಗುತ್ತದೆ. ಉದಯ್ ನಿರ್ಮಾಪಕರು ಸಿಕ್ತಾರೆ ಅಂತಾ ಫ್ಯಾಷನ್ ಗೋಸ್ಕರ್ ಸಿನಿಮಾ ಮಾಡಿಲ್ಲ. ಆಳವಾಗಿ ತಾಂತ್ರಿಕವಾಗಿ ಚಿತ್ರ ಮಾಡಿದ್ದಾರೆ' ಎಂದರು.

'ಬನ್​ ಟೀ' ಚಿತ್ರದಲ್ಲಿ ಮೌರ್ಯ, ತನ್ಮಯ್, ಉಮೇಶ್ ಸಕ್ಕರೆನಾಡು, ಶ್ರೀದೇವಿ, ನಿಶಾ, ಗುಂಡಣ್ಣ, ಸುನಿಲ್ ನಟಿಸಿರುವ ಈ ಚಿತ್ರವನ್ನು ರಾಧಾಕೃಷ್ಣ ಬ್ಯಾನರ್​ನಡಿ ಆರ್. ಕೇಶವ ನಿರ್ಮಾಣ ಮಾಡಿದ್ದು, ರಾಜರಾವ್ ಅಂಚಲ್ಕರ್ ಕ್ಯಾಮೆರಾ, ಪ್ರದ್ಯೋತನ್ ಸಂಗೀತ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net