

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯದಲ್ಲಿ ಏರುಪೇರಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಟ ದರ್ಶನ್ ಹೊಟ್ಟೆ ನೋವಿನ ಕಾರಣದಿಂದ ನಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ನಟ ದರ್ಶನ್ಗೆ ಏನಾಗಿತ್ತು ಎಂಬ ಬಗ್ಗೆ ನಿರ್ಮಾಪಕ ಸಂದೇಶ್ ಮಾಹಿತಿ ನೀಡಿದ್ದಾರೆ. ದರ್ಶನ್ ತಮ್ಮ ತೋಟಕ್ಕೆ ಕುದುರೆಗಳನ್ನು ನೋಡಲು ತೆರಳಿದ್ದರು. ಈ ವೇಳೆ ಗ್ಯಾಸ್ಟ್ರಿಕ್ ಉಲ್ಬಣಗೊಂಡು ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹಾಗಾಗಿ ಆಸ್ಪತ್ರೆಗೆ ತೆರಳಿ ಚೆಕ್ ಮಾಡಿಸಿದ್ದಾರೆ. ಕಿಡ್ನಿ, ಹಾರ್ಟ್ ಸೇರಿ ಎಲ್ಲವೂ ನಾರ್ಮಲ್ ಆಗಿದೆ. ಬೇರೇನೂ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)