ಸಾಧಾರಣ ಮೈಕಟ್ಟು, ಸಿಂಪಲ್ ಲುಕ್ ಮತ್ತು ಅಭಿನಯದಿಂದಲೇ ಇಂದು ಅಪಾರ ಸಿನಿಪ್ರಿಯರನ್ನು ಸಂಪಾದಿಸಿರುವ ಪ್ರದೀಪ್, ಇದೀಗ ತಮ್ಮ ಅಭಿಮಾನಿಗಳ ಬಳಗ ಮಾತ್ರವಲ್ಲದೇ ಅವಕಾಶಗಳು ಹಾಗೂ ಸಂಭಾವನೆಯನ್ನು ದುಪ್ಪಟ್ಟು ಮಾಡಿಕೊಂಡಿದ್ದಾರೆ. ಅದು ಕೇವಲ ಎರಡ್ಮೂರು ಚಿತ್ರಗಳಿಂದ ಎಂಬುದೇ ಗಮನಾರ್ಹ. 2022ರಲ್ಲಿ, 'ಲವ್ ಟುಡೇ' ಎಂಬ ಚಿತ್ರದ ಮುಖೇನ ಕಾಲಿವುಡ್ಗೆ ಪಾದಾರ್ಪಣೆ ಮಾಡಿದ ಅವರು, 'ಡ್ರ್ಯಾಗನ್' ಚಿತ್ರದಲ್ಲಿ ಅಪಾರ ಯಶಸ್ಸು ಕಂಡರು. ಇದಾದ ಬಳಿಕ ತೆರೆಕಂಡ 'ಡ್ಯೂಡ್'ನಲ್ಲಿ ಅಂತಹ ಗೆಲುವು ಕಾಣಲಿಲ್ಲ. ಆದರೆ, ಅವರ ನಟನೆಗೆ ಎಂದಿನಂತೆ ಪ್ರಶಂಸೆಗಳು ವ್ಯಕ್ತವಾಯಿತು.