ಗೋಲ್ಡನ್​ ಗ್ಲೋಬ್​ ಆಯ್ತು; ಈಗ 'RRR'ಗೆ ಕ್ರಿಟಿಕ್ಸ್​ ಚಾಯ್ಸ್​ ಪ್ರಶಸ್ತಿ …

RRR
Published on

ಲಾಸ್​ ಆಂಜಲೀಸ್​: ರಾಜಮೌಳಿ ನಿರ್ದೇಶನದ 'RRR' ಚಿತ್ರವು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರೇಕ್ಷಕರ ಗಮನವನ್ನು ಸೆಳೆದಿದೆ. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ.

ಇತ್ತೀಚೆಗಷ್ಟೇ, 'RRR' ಚಿತ್ರದ 'ನಾಟ್ಟು ನಾಟ್ಟು' ಹಾಡಿಗೆ ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಬಂದಿತ್ತು. ಈಗ ಅಮೆರಿಕದಲ್ಲಿ ನೀಡಲಾಗುವ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯನ್ನು ಈ ಚಿತ್ರ ತನ್ನದಾಗಿಸಿಕೊಂಡಿದೆ. 28ನೇ ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​ನ ಅತ್ಯುತ್ತಮ ವಿದೇಶಿ ಭಾಷೆಯ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಬೀಗಿದೆ. ಜತೆಗೆ 'ನಾಟು ನಾಟು' ಹಾಡಿಗೆ ಅತ್ಯುತ್ತಮ ಗೀತೆ ಪ್ರಶಸ್ತಿ ದೊರೆತಿದೆ.

ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ರಾಜಮೌಳಿ, 'ನನ್ನ ಜೀವನದಲ್ಲಿರುವ ಎಲ್ಲ ಮಹಿಳೆಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ತಾಯಿ ರಾಜನಂದಿನಿ, ಅತ್ತಿಗೆ ಶ್ರೀವಲ್ಲಿ, ಪತ್ನಿ ರಮಾ ಮತ್ತು ನನ್ನ ಮಕ್ಕಳಿಗೆ ಈ ಪ್ರಶಸ್ತಿ ಅರ್ಪಣೆ' ಎಂದು ಹೇಳಿದ್ದಾರೆ.

'RRR' ಚಿತ್ರವನ್ನು ವಿ.ವಿ. ದಾನಯ್ಯ ನಿರ್ಮಿಸಿದ್ದು, ಜ್ಯೂನಿಯರ್​ ಎನ್​ಟಿಆರ್​, ರಾಮ್​ಚರಣ್​ ತೇಜ, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿದ್ದಾರೆ. ಎಂ.ಎಂ. ಕೀರವಾಣಿ ಅವರ ಸಂಗೀತ ಈ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net