

ಇಂದು ಸ್ವಾತಂತ್ರ್ಯ ದಿನಾಚರಣೆ. 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶುಭ ಕೋರಿ ಹಲವು ಚಿತ್ರತಂಡಗಳು ಇಂದು ಸೋಷಿಯಲ್ ಮೀಡಿಯಾ ಮೂಲಕ ಜನತೆಗೆ ಶುಭಕೋರಿವೆ.
ಬರೀ ಚಿತ್ರತಂಡಗಳಷ್ಟೇ ಅಲ್ಲ, ಹಲವು ನಟ-ನಟಿಯರು ಸಹ ಇಂದು ಶುಭ ಕೋರುವುದರ ಜತೆಗೆ, ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದ್ದಾರೆ. ದರ್ಶನ್ ಸಹ ಈ ಕುರಿತು ಟ್ವೀಟ್ ಮಾಡಿದ್ದು, ಜತೆಗೆ 'ರಾಬರ್ಟ್' ಚಿತ್ರದ ಶುಭಾಶಯದ ಪೋಸ್ಟರ್ ಹಂಚಿಕೊಂಡಿರುವುದು ವಿಶೇಷ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಆಗಸ್ಟ್ 15 ಭಾರತೀಯರ ಪಾಲಿನ ಸುದಿನ. ಈ ಶುಭ ದಿನವನ್ನು ನಾವು ಹೆಮ್ಮೆಯಿಂದ ಆಚರಿಸಬೇಕು. ನಮ್ಮ ಜೀವನದ ಕಣಕಣದಲ್ಲೂ ದೇಶಭಕ್ತಿ ಜಾಗೃತವಾಗಿರಬೇಕು. ಸರ್ವರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು' ಎಂದು ಹೇಳಿದ್ದಾರೆ.
ಅಂದಹಾಗೆ, 'ರಾಬರ್ಟ್' ಚಿತ್ರದ ಕೆಲಸಗಳು ಮುಗಿದಿದ್ದು, ಚಿತ್ರ ಬಿಡುಗಡೆಗೆ ಕಾದಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಚಿತ್ರ ಬಿಡುಗಡೆಯಾಗಿ ನಾಲ್ಕು ತಿಂಗಳುಗಳಾಗಬೇಕಿತ್ತು. ಆದರೆ, ಕರೊನಾ ಮತ್ತು ಲಾಕ್ಡೌನ್ನಿಂದ ಚಿತ್ರದ ಬಿಡುಗಡೆ ಅನಿರ್ಧಿಷ್ಟಾವಧಿ ಮುಂದಕ್ಕೆ ಹೋಗಿದೆ.
ಈ ಮಧ್ಯೆ, ಚಿತ್ರತಂಡದವರು ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಚಿತ್ರದ ಹಲವು ಪೋಸ್ಟರ್ಗಳನ್ನು ಬಿಡುಗಡೆ ಮಾಡುತ್ತಲೇ ಬಂದಿದ್ದು, ಈಗ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿ ಹೊಸ ಪೋಸ್ಟರ್ವೊಂದನ್ನು ಇದೀಗ ಬಿಡುಗಡೆ ಮಾಡಿದೆ.