ಚಿತ್ರರಂಗದವರ ಲಸಿಕೆ ಅಭಿಯಾನವನ್ನು ಉದ್ಘಾಟಿಸಿದ ಡಿಸಿಎಂ ಅಶ್ವಥನಾರಾಯಣ್

Vaccination Drive - Final
Published on

ಬೆಂಗಳೂರು: ಚಿತ್ರರಂಗದವರಿಗೆ ಆಯೋಜಿಸಲಾಗಿರುವ ಎರಡು ದಿನಗಳ (ಮೇ 31 ಮತ್ತು ಜೂನ್​ 01) ಲಸಿಕೆ ಅಭಿಯಾನವನ್ನು ಸೋಮವಾರ ಬೆಳಿಗ್ಗೆ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ್ ಉದ್ಘಾಟಿಸಿದ್ದಾರೆ.

ಕನ್ನಡ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ಉಚಿತವಾಗಿ ಲಸಿಕೆ ವಿತರಿಸಬೇಕು ಎಂದು ಕನ್ನಡ ಚಿತ್ರರಂಗದ ಹಲವು ಗಣ್ಯರು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದಕ್ಕೆ ಪ್ರತಿಯಾಗಿ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಎರಡು ದಿನಗಳ ಲಸಿಕೆ ಕೋವಿಶಿಲ್ಡ್ ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಞರು ಲಸಿಕೆ ಹಾಕಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ರಾಕ್‌ಲೈನ್ ವೆಂಕಟೇಶ್, ದೊಡ್ಡಣ್ಣ, ರೂಪಾ ಅಯ್ಯರ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net