ಫೆಬ್ರವರಿ 19ಕ್ಕೆ ಧ್ರುವ ಸರ್ಜಾ ಪೊಗರು ಬಿಡುಗಡೆ

Pogaru
Published on

ಬೆಂಗಳೂರು: ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ಬಿಡುಗಡೆಯ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಈಗ ಸ್ವತಃ ಧ್ರುವ ಇದಕ್ಕೆಲ್ಲ ಫುಲ್​ಸ್ಟಾಪ್ ಇಟ್ಟಿದ್ದಾರೆ. ಸೋಮವಾರ ಸಂಜೆ ಇನ್​ಸ್ಟಾಗ್ರಾಂನಲ್ಲಿ ಲೈವ್ ಬಂದಿದ್ದ ಅವರು, ಫೆ. 19ರ ರಥಸಪ್ತಮಿ ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ.

‘ಈಗಾಗಲೇ ಕರೊನಾಗೆ ಔಷಧಿ ಬಂದಿದೆ. ಭಯಬಿಟ್ಟು ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಆಶೀರ್ವಾದ ಮಾಡಿ. ಈ ಹಿಂದೆ ನನ್ನ ಚಿತ್ರಗಳು ಬಿಡುಗಡೆಯಾದಾಗ ತುಂಬ ನಿರೀಕ್ಷೆಗಳನ್ನು ಇಟ್ಟುಕೊಂಡು ಬರಬೇಡಿ ಎಂದಿದ್ದೆ. ಆದರೆ, ಈ ಬಾರಿ ನಿರೀಕ್ಷೆ ಇಟ್ಟುಕೊಂಡೇ ಬನ್ನಿ. ಇದು ದುರಹಂಕಾರ ಅಥವಾ ಅತಿಯಾದ ವಿಶ್ವಾಸವಲ್ಲ. ನಿಜಕ್ಕೂ ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ. ‘ಪೊಗರು’ ಚಿತ್ರವನ್ನು ನಂದಕಿಶೋರ್ ನಿರ್ದೇಶಿಸಿದ್ದಾರೆ. ರಶ್ಮಿಕಾ ಮಂದಣ್ಣ, ಧನಂಜಯ್, ರಾಘವೇಂದ್ರ ರಾಜಕುಮಾರ್ ಚಿತ್ರದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net