

ಬೆಂಗಳೂರು: ಸ್ಯಾಂಡಲ್ವುಡ್ ನಟ ದಿ. ಚಿರಂಜೀವಿ ಸರ್ಜಾ ಜನ್ಮದಿನವಿಂದು. ಈ ದಿನದಂದೇ ಸಹೋದರ ಧ್ರುವ ಸರ್ಜಾ ಅವರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.
ವಿಶೇಷ ಏನೆಂದರೆ, ಈಗಾಗಲೇ ಪೊಗರು ಸಿನಿಮಾಕ್ಕೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಂದಕಿಶೋರ್ ಈ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಲಿದ್ದು, ಅದಕ್ಕಿಂತ ಮೊದಲು ಇದೀಗ ಸ್ಕ್ರಿಪ್ಟ್ ಪೂಜೆ ಮಾಡಿಕೊಂಡಿದೆ ಚಿತ್ರತಂಡ.
ನಿರ್ಮಾಪಕ ಉದಯ್ ಮೆಹ್ತಾ ಈ ಸಿನಿಮಾ ನಿರ್ಮಾಣ ಮಾಡಲಿದ್ದು, ಇನ್ನು ಕೆಲ ದಿನಗಳಲ್ಲಿ ಸಿನಿಮಾ ಸಂಬಂಧಿ ಕೆಲಸ ಚುರುಕು ಪಡೆದುಕೊಳ್ಳಲಿದೆ.
ಇತ್ತ ಪೊಗರು ಸಿನಿಮಾದ ಬಹುತೇಕ ಎಲ್ಲ ಕೆಲಸಗಳು ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳೂ ಕೊನೇ ಹಂತದಲ್ಲಿವೆ. ಎಲ್ಲ ಅಂದುಕೊಂಡಂತೆ ಆದರೆ, ಈ ವರ್ಷಾಂತ್ಯಕ್ಕೆ ಪೊಗರು ಬಿಡುಗಡೆ ಆಗುವ ಸಾಧ್ಯತೆಗಳಿವೆ.