ನಯನತಾರಾ ಜತೆ ಈ ಸಿನಿಮಾ ಮಾಡಿದ್ದೇ ಒಂದು ದೊಡ್ಡ ತಪ್ಪು ಎಂದ ಖ್ಯಾತ ನಿರ್ದೇಶಕ!

nayanthara
Published on

ಚೆನ್ನೈ: ಇಂದು ಲೇಡಿ ಸೂಪರ್​ ಸ್ಟಾರ್​ ಎಂದೇ ಖ್ಯಾತಿಯಾಗಿರುವ ನಯನತಾರಾ ಆರಂಭದಲ್ಲಿ ಆ್ಯಂಕರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದವರು. ಸೌತ್​​ ಇಂಡಸ್ಟ್ರಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಇದೀಗ ಬಾಲಿವುಡ್ ಇಂಡಸ್ಟ್ರಿಯಲ್ಲೂ ಯಶಸ್ಸ ಗಳಿಸಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರು ನಯನತಾರಾ ಕ್ರೇಜ್​ ಮಾತ್ರ ಕಮ್ಮಿ ಆಗಿಲ್ಲ. ಈಗಲೂ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ.

Tollywood director

ಈಗಾಗಲೇ 75 ಚಿತ್ರಗಳನ್ನು ಮುಗಿಸಿರುವ ಈ ಲೇಡಿ ಸೂಪರ್ ಸ್ಟಾರ್ ಇತ್ತೀಚಿನ ದಿನಗಳಲ್ಲಿ ನಾಯಕಿ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಆದರೆ ನಯನ ಸದಾ ಒಂದಿಲ್ಲೊಂದು ವಿವಾದದಲ್ಲಿ ಭಾಗಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೇ ಖ್ಯಾತ ಟಾಲಿವುಡ್​ ನಿರ್ದೇಶಕ ಶೇಖರ್ ಕಮ್ಮುಲ ಅವರು ನಯನತಾರಾ ವಿರುದ್ಧ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶೇಖರ್​ ಕಮ್ಮುಲ ಅವರು ಫಿದಾ ಮತ್ತು ಲವ್ ಸ್ಟೋರಿ ಸಿನಿಮಾ ಮೂಲಕ ಬ್ಯಾಕ್ ಟು ಬ್ಯಾಕ್ ಸಕ್ಸಸ್​ ಪಡೆದಿದ್ದಾರೆ. ಲೇಡಿ ಸೂಪರ್​ಸ್ಟಾರ್​ ನಯನತಾರಾ ಜೊತೆ "ಅನಾಮಿಕ" ಚಿತ್ರವನ್ನು ಶೇಖರ್​ ಅವರು ನಿರ್ದೇಶನ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾ 2014ರಲ್ಲಿ ತೆರೆಕಂಡಿತು. ಆದರೆ, ಈ ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಆದರೆ, ಈ ಸಿನಿಮಾದ ಬಗ್ಗೆ ಶೇಖರ್ ಕಮ್ಮುಲ ಅವರು ಇತ್ತೀಚೆಗೆ ಮಾಡಿರುವ ಕಾಮೆಂಟ್‌ಗಳು ವೈರಲ್ ಆಗುತ್ತಿವೆ.

ಅನಾಮಿಕ ಸಿನಿಮಾ ಹಿಂದಿಯ ಕಹಾನಿ ಸಿನಿಮಾದ ರಿಮೇಕ್. ನಯನತಾರಾ ಹಾಕಿಕೊಂಡು ಈ ಸಿನಿಮಾ ಮಾಡಿದ್ದೇ ಒಂದು ತಪ್ಪು ಎಂದು ಶೇಖರ್ ಕಮ್ಮುಲ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಭಯಾ ಘಟನೆ ದೇಶದೆಲ್ಲೆಡೆ ಸಂಚಲನ ಮೂಡಿಸಿದ ನಂತರ ನಾಯಕಿ ಪ್ರಧಾನ ಸಿನಿಮಾ ಮಾಡಲು ಯೋಚಿಸಿದ್ದೇ. ಹೀಗಾಗಿ ಅನಾಮಿಕ ಸಿನಿಮಾ ಮಾಡಿದೆ. ಆದರೆ, ಆ ಸಿನಿಮಾ ಮಾಡಿದ್ದು ತಪ್ಪು ಎಂದು ಹೇಳಿದ್ದಾರೆ.

ಸದ್ಯ ಶೇಖರ್ ಕಮ್ಮುಲ ಅವರು ಕುಬೇರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ಧನುಷ್ ಮತ್ತು ರಶ್ಮಿಕಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಯಾವಾಗ ರಿಲೀಸ್ ಆದ್ರೂ ಸೆನ್ಸೇಷನಲ್ ಸಕ್ಸಸ್ ಆಗುತ್ತೆ ಅನ್ನೋದು ಅಭಿಮಾನಿಗಳ ನಿರೀಕ್ಷೆ. ಯಾಕೆಂದರೆ, ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಶೇಖರ್ ಕಮ್ಮುಲ ಅವರ ಯಶಸ್ಸಿನ ಗುಟ್ಟು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ನಿಜವಾಗುತ್ತೆ ಎಂಬುದನ್ನು ಸಿನಿಮಾ ಬಿಡುಗಡೆಯಾದ ಬಳಿಕ ಗೊತ್ತಾಗಲಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net