ಮನುಷ್ಯ ವರ್ಸಸ್ ಪ್ರಕೃತಿ; ಸೆಟ್ಟೇರಲಿದೆ ರಿಷಬ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾ

Rishab
Published on

ಬೆಂಗಳೂರು: ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ನಿರ್ದೇಶನಕ್ಕಿಂತ ನಟನೆಯಲ್ಲಿಯೇ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಇದೀಗ ಲಾಕ್‌ಡೌನ್ ಸಡಿಲಗೊಳ್ಳುತ್ತಿದ್ದಂತೆ ನಿರ್ದೇಶನಕ್ಕಿಳಿದಿದ್ದಾರೆ. ಹಾಗೆಂದ ಮಾತ್ರಕ್ಕೆ ಈ ಹಿಂದೆ ಘೋಷಣೆ ಆಗಿದ್ದ ‘ರುದ್ರಪ್ರಯಾಗ’ ಚಿತ್ರವನ್ನು ಅವರು ಕೈಗೆತ್ತಿಕೊಂಡಿಲ್ಲ. ಬದಲಿಗೆ ಹೊಸದಾದ ಪ್ರಾಜೆಕ್ಟ್ ಆರಂಭಿಸಲಿದ್ದಾರೆ. ಈ ಕಥೆ ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಮಾತನಾಡಲಿದೆಯಂತೆ.

ಲಾಕ್‌ಡೌನ್‌ನಲ್ಲಿ ಈ ಕಥೆ ಮಾಡಿರುವ ರಿಷಬ್, ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ ‘ಹೀರೋ’ ಸಿನಿಮಾವನ್ನೇ ಚಿತ್ರೀಕರಿಸಿದ್ದರು. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಒಳ್ಳೆಯ ಪ್ರತಿಕ್ರಿಯೆಯೂ ಚಿತ್ರಕ್ಕೆ ಸಿಕ್ಕಿತ್ತು. ಇದೀಗ ಈ ಸಲದ ಲಾಕ್‌ಡೌನ್‌ನಲ್ಲಿ ಮತ್ತೊಂದು ವಿಶೇಷ ಕಥೆ ಮಾಡಿದ್ದಾರೆ.

ಇನ್ನು ರಿಷಬ್ ಶೆಟ್ಟಿ ಕೊನೆಯದಾಗಿ ನಿರ್ದೇಶನ ಮಾಡಿದ್ದು, ‘ಸ.ಹಿ.ಪ್ರಾ.ಶಾಲೆ ಕಾಸರಗೋಡು’. ಅದಾದ ಬಳಿಕ ನಟನೆಯಲ್ಲಿಯೇ ಹೆಚ್ಚು ಸಕ್ರಿಯರಾಗಿ, ಒಂದಷ್ಟು ಸಿನಿಮಾಗಳ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ಇದೀಗ ಮತ್ತೆ ನಿರ್ದೇಶಕನ ಕ್ಯಾಪ್ ಧರಿಸಿದ್ದು, ಸೆಪ್ಟೆಂಬರ್ ವೇಳೆಗೆ ಸಿನಿಮಾ ಸೆಟ್ಟೆರಲಿದೆ. ಬಹುತೇಕ ಮಂಗಳೂರು ಸುತ್ತಮುತ್ತ ಶೂಟಿಂಗ್ ನಡೆಯಲಿದೆ. ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ? ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net