

ಬೆಂಗಳೂರು: ಜೋಗಿ ಖ್ಯಾತಿಯ ನಿರ್ದೇಶಕ, ನಟ ಪ್ರೇಮ್ ಅವರ ತಾಯಿ ಭಾಗ್ಯಮ್ಮ ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಭಾಗ್ಯಮ್ಮ ಅವರಿಗೆ 75 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ಅವರು ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತ ಕ್ಯಾನ್ಸರ್) ಬಳಲುತ್ತಿದ್ದರು. ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಈ ನಿಟ್ಟಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಭಾಗ್ಯಮ್ಮ ಅವರಿಗೆ ಪ್ರೇಮ್ ಮತ್ತು ಅರುಣ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.
ಭಾಗ್ಯಮ್ಮ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ಇಂದು ಮಂಡ್ಯದ ಬೆಸಗರಹಳ್ಳಿ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ತಿಯೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ನಡುವೆ, ಪ್ರೇಮ್ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಫೇಸ್ಬುಕ್ನಲ್ಲಿ ಅತ್ತೆ ಭಾಗ್ಯಮ್ಮ ಅವರ ನಿಧನ ಸುದ್ದಿ ಪ್ರಕಟಿಸಿದ್ದಾರೆ.