ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪ್ರಸಿದ್ಧ ನಿರ್ದೇಶಕ ಎಂ.ಎಸ್. ಸತ್ಯು ಚೇತರಿಕೆ

MSS
Published on

ಬೆಂಗಳೂರು: ಕೆಲವು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಂತಾರಾಷ್ಟ್ರೀಯ ಮಟ್ಟದ ಚಲನಚಿತ್ರ ಮತ್ತು ರಂಗ ನಿರ್ದೇಶಕ ಎಂ.ಎಸ್. ಸತ್ಯು ಅವರ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡುಬಂದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯ ಸ್ನಾನದ ಕೋಣೆಯಲ್ಲಿ ಬಿದ್ದು ಮೂಳೆ ಮುರಿತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಅವರ ಪುತ್ರಿ ಶೈಲಿ ಸತ್ಯು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಈಗ ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದು, ವಿಶ್ರಾಂತಿಯಲ್ಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುತ್ತಿರುವ ಗಾಳಿ ಸುದ್ದಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಸತ್ಯು ಅವರ ಆಪ್ತ ಬಳಗದಲ್ಲಿ ಒಬ್ಬರಾಗಿರುವ ಚಿತ್ರ ನಿರ್ದೇಶಕ ಸುಧೀರ್ ಅತ್ತಾವರ ಹೇಳಿದ್ದಾರೆ.

ಬರುವ ಜುಲೈ 6ಕ್ಕೆ 91 ವರ್ಷ ಪೂರೈಸಲಿರುವ ಸತ್ಯು ಅವರಿಗೆ ಕೋವಿಡ್ ತಪಾಸಣೆ ಕೂಡ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದೂ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net