

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ಬಾಲಿವುಡ್ ಬ್ಯೂಟಿ ದಿಶಾ ಪಟಾಣಿ ಇನ್ಸ್ಟಾಗ್ರಾಂನಲ್ಲಿ ಹಾಟ್ ಫೋಟೋಗಳನ್ನು ಹರಿಬಿಟ್ಟಿದ್ದಾರೆ. ಸದಾ ಹಾಟ್ ಆ್ಯಂಡ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ದಿಶಾ, ತಮ್ಮ ಪ್ರವಾಸದ ವೇಳಿ ಸ್ವಿಮ್ಮಿಂಗ್ಫೂಲ್ನಲ್ಲಿ ತೆಗೆದ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ಫೋಟೋ ಸಖತ್ ಸದ್ದು ಮಾಡುತ್ತಿದೆ.
ಪ್ರವಾಸ ಪ್ರಿಯೆಯಾಗಿರುವ ದಿಶಾ ಪಟಾನಿ, ಸಿನಿಮಾ ಶೂಟಿಂಗ್ನಿಂದ ಬಿಡುವ ಪಡೆದುಕೊಂಡು ಆಗಾಗ್ಗೆ ವಿದೇಶಗಳಿಗೆ ಪ್ರವಾಸ ಹೋಗುತ್ತಾರೆ. ಹೆಚ್ಚಾಗಿ ಸಮುದ್ರ ತೀರದ ತಾಣಗಳಿಗೆ ಭೇಟಿ ಕೊಡುವಾ ದಿಶಾ, ಸಾಕಷ್ಟು ಹಾಟ್ ಆಗಿ ಕಾಣಿಸಿಕೊಂಡು ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋ ಅಪ್ಲೋಡ್ ಮಾಡುತ್ತಾರೆ. ಸದ್ಯ ವಿದೇಶಿ ಪ್ರವಾಸ ಕೈಗೊಂಡಿರುವ ದಿಶಾ ಪಟಾನಿ ಬಿಕಿನಿ ಅವತಾರದಲ್ಲಿ ಫೋಸ್ ಕೊಟ್ಟಿದ್ದಾರೆ. ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸದ್ಯ ಅವರು ಯಾವ ದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಇನ್ನೂ ಬಹಿರಂಗ ಪಡಿಸಿಲ್ಲ.
ದಿಶಾ ಪಟಾನಿ ಸಾಲು ಸಾಲು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಹೆಸರಿಡದ ಚಿತ್ರವೊಂದರಲ್ಲಿ ತಮಿಳು ನಟ ಸೂರ್ಯ ಜತೆಗೆ ದಿಶಾ ಪಟಾನಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯ ಧರ್ಮ ಪ್ರೊಡಕ್ಷನ್ಸ್ನ ಆಕ್ಷನ್-ಫ್ರಾಂಚೈಸ್ ‘ಯೋಧ’ ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಜತೆ ನಟಿಸಿದ್ದಾರೆ. ಮೋಹಿತ್ ಸೂರಿ ಅವರ ‘ಏಕ್ ವಿಲನ್ ರಿಟರ್ನ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಜಾನ್ ಅಬ್ರಹಾಂ, ಅರ್ಜುನ್ ಕಪೂರ್ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್)