ಸುದೀಪ್​ಗೆ ಅಭಿನಂದನೆ ಸಲ್ಲಿಸಿದ ಸಚಿವ ಸುಧಾಕರ್​

Sudhakar - Sudeep - Final
Published on

ಕಿಚ್ಚ ಸುದೀಪ್​ ಚಾರಿಟಬಲ್​ ಟ್ರಸ್ಟ್​ ವತಿಯಿಂದ ಇತ್ತೀಚೆಗಷ್ಟೇ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿರುವುದು ಗೊತ್ತೇ ಇದೆ. ಸುದೀಪ್​ ಅವರ ಈ ಕೆಲಸಕ್ಕೆ ಸಚಿವ ಕೆ. ಸುಧಾಕರ್​ ಇದೀಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳು ಚಿತ್ರದುರ್ಗ ಜಿಲ್ಲೆಯಲ್ಲಿನ ನಾಲ್ಕು ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ದತ್ತು ಪಡೆದಿದ್ದರು, ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಆವಿಗೆ ಹಳ್ಳಿ, ಹಾಳಸಸಿ ಮತ್ತು ಸಾಗರದ ಎಸ್.ಎನ್ ಬಡಾವಣೆ, ಎಲ್.ಎಲ್. ಹಳ್ಳಿಯಲ್ಲಿನ ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ದತ್ತು ಪಡೆದುಕೊಂಡು, ಅಭಿವೃದ್ಧಿ ಕೆಲಸಕ್ಕೆ ಪಣತೊಟ್ಟಿದೆ.

ಈ ವಿಷಯವಾಗಿ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಆರೋಗ್ಯ ಶಿಕ್ಷಣ ಸಚಿವ ಕೆ. ಸುಧಾಕರ್​ ಅವರು ಸಹ ಸುದೀಪ್​ ಅವರ ಈ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ಸುದೀಪ್​ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

'ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು' ಎಂದು ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net