ರಾಕ್​ಲೈನ್​ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದು ಶೂಟಿಂಗ್ ಮುಗಿಸಿದ 'ಫ್ಯಾಂಟಸಿ' ತಂಡ

WhatsApp Image 2020-11-09 at 7.09.59 PM
Published on

ಬೆಂಗಳೂರು: ಇತ್ತೀಚೆಗಷ್ಟೇ ಚಿತ್ರೀಕರಣ ಶುರುಮಾಡಿದ್ದ ಫ್ಯಾಂಟಸಿ ತಂಡ ಇದೀಗ ಕುಂಬಳಕಾಯಿ ಒಡೆದು , ಚಿತ್ರೀಕರಣ ಮುಗಿಸಿಕೊಂಡ ಸಂಭ್ರಮದಲ್ಲಿದೆ. ಕೇವಲ 24 ದಿನದಲ್ಲಿ ಶೂಟಿಂಗ್​ ಕಂಪ್ಲೀಟ್​ ಮಾಡಿಕೊಂಡಿದೆ. ಆ 24 ದಿನದ ಶೂಟಿಂಗ್​ ಪಯಣವನ್ನು ಮೆಲುಕು ಹಾಕುವ ಉದ್ದೇಶಕ್ಕೆ ಶೂಟಿಂಗ್​ ಲೋಕೆಷನ್​ನಲ್ಲಿಯೇ ಪತ್ರಿಕಾಗೋಷ್ಟಿ ಆಯೋಜಸಿತ್ತು ಫ್ಯಾಂಟಸಿ ತಂಡ.

ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್​. ನಿರ್ದೇಶಕರ ತಂದೆ ತಾಯಿಯವರಾದ ಎಂ. ಮಹಾದೇವಿ, ಟಿ. ರಂಗಸ್ವಾಮಿ ಈ ಚಿತ್ರಕ್ಕೆ ಸಹ- ನಿರ್ಮಾಪಕರಾಗಿದ್ದಾರೆ.

‘ಇಂಜಿನಿಯರಿಂಗ್​ ಅರ್ಧಕ್ಕೆ ಬಿಟ್ಟು, ಸಿನಿಮಾ ಬೆನ್ನಹಿಂದೆ ಬಿದ್ದೆ. ಅಪ್ಪ ಅಮ್ಮನಿಂದಲೂ ಸಾಥ್​ ಸಿಕ್ಕಿತು. ಒಳ್ಳೇ ಕಥೆಯೂ ಸಿದ್ಧವಾಯ್ತು. ನಾನೇ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಿ ಕೆಲಸ ಆರಂಭಿಸಿದೆ. ಕಂಟೆಂಟ್ ಎಷ್ಟೇ ಗಟ್ಟಿಯಾಗಿದ್ದರೂ, ಅದನ್ನು ತೋರಿಸುವ ಛಾಯಾಗ್ರಾಹಕ ಅಷ್ಟೇ ಮುಖ್ಯ. ಆ ಸ್ಥಾನ ತುಂಬಲು ಪಿ.ಕೆ. ಎಚ್​ ದಾಸ್​ ಬಂದರು. ಶೇ. 100 ಕೇಳಿದರೆ, ಇನ್ನೂ ಹತ್ತು ಹೆಚ್ಚೇ ಕೊಟ್ಟಿದ್ದಾರೆ. ಗಣೇಶ್​ ನಾರಾಯಣ್​ ಸಂಗೀತ ನೀಡಿದ್ದಾರೆ. ಶಶಿರಾಮ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಥ್ರಿಲ್ಲರ್ ಶೈಲಿಯ ಸಿನಿಮಾ. ಚಿತ್ರದ ಶೇ. 90 ಭಾಗ ಒಳಾಂಗಣದಲ್ಲಿ ನಡೆದರೆ, ಇನ್ನು ಶೇ. 10 ಹೊರಾಂಗಣದಲ್ಲಿ ಶೂಟ್ ಮಾಡಿದ್ದೇವೆ. ಪೋಸ್ಟ್ ಪ್ರೊಡಕ್ಷನ್​ ಕೆಲಸವೂ ನಡೆಯುತ್ತಿದೆ. ಫೆಬ್ರವರಿ ವೇಳೆಗೆ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದಲೇ ಸಿನಿಮಾ ಮಾಡಿದ್ದೇನೆ.’ ಎಂದು ತಾಂತ್ರಿಕ ವರ್ಗವನ್ನೂ ಪರಿಚಯಿಸಿದರು.

ಚಿತ್ರದ ನಾಯಕಿ ಪ್ರಿಯಾಂಕಾ ಸಹ ಸಿನಿಮಾ ಬಗ್ಗೆ ತುಂಬ ಎಗ್ಸೈಟ್ ಆಗಿದ್ದಾರೆ. ‘ಬಿಗ್​ಬಾಸ್​ನಲ್ಲಿ ದಿನದೂಡಿದಂತೆ ಕೊರೊನಾದಲ್ಲಿಯೂ ಸಮಯ ಕಳೆದಿದ್ದೆವು. ಖುಷಿ ವಿಚಾರವನ್ನು ಕೇಳಿ ತುಂಬ ದಿನ ಆಗಿತ್ತು. ಆಗ ಸಿಕ್ಕ ಸಿಹಿ ಸುದ್ದಿ ಈ ಫ್ಯಾಂಟಸಿ ಸಿನಿಮಾ. ಇದು ನನ್ನ ಮೊದಲ ಸಿನಿಮಾ ಆದರೂ, ಧಾರಾವಾಹಿಯಂತೆ ಇಲ್ಲಿಯು ನೆಗೆಟಿವ್​ ಪಾತ್ರ ಮುಂದುವರಿದಿದೆ. ’ ಎಂಬುದು ಅವರ ಮಾತು. ಅದೇ ರೀತಿ ಬಾಲನಟ ಅನುರಾಗ್ ಸಹ ತನ್ನ ಶೂಟಿಂಗ್​ ಅನುಭವ ಹಂಚಿಕೊಂಡ. ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದನ್ನು ನಿಭಾಯಿಸಿದ ಖುಷಿ ಇದೆ ಎಂದರು ನಟ ಬಾಲರಾಜ್ವಾಡಿ ಮತ್ತು ಹೇಮಂತ್. ಪಿಕೆಎಚ್ ದಾಸ್ ಸಹ ಸಿನಿಮಾದಲ್ಲಿನ ಕ್ಯಾಮರಾ ಕೈಚಳಕದ ಬಗ್ಗೆ ಮಾತನಾಡಿದರು. ಇನ್ನುಳಿದಂತೆ ಹರಿಣಿ, ಮೂರ್ತಿ, ಗೌರಿ ಸೇರಿ ಹಲವರು ತಾರಾಬಳಗದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net