

ಬೆಂಗಳೂರು: ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ 'ಫೈರ್ ಫ್ಲೈ’ ಸಿನಿಮಾ ಮೂಲಕ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ‘ಮಾಯಾಬಜಾರ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಯುವ ನಟ ವಂಶಿ ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದು, ಮೊದಲ ಬಾರಿಗೆ ನಾಯಕರಾಗಿ ಕೂಡ ನಟಿಸುತ್ತಿದ್ದಾರೆ.
ಈಗಾಗಲೇ ಸಿನಿಮಾದ ಪೊಸ್ಟರ್ ಬಿಡುಗಡೆ ಮಾಡಲಾಗಿದ್ದು, ಈಗ ಚಿತ್ರತಂಡ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದೆ. ಮೈಸೂರು,ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.
ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.