ಚಿರು ಸರ್ಜಾ ಸಮಾಧಿ ನಿರ್ಮಾಣಕ್ಕೆ ಶಂಕುಸ್ಥಾಪನೆ

Ullasa Chiru
Published on

ಬೆಂಗಳೂರು: ಸ್ಯಾಂಡಲ್​ವುಡ್ ನಟ ದಿ. ಚಿರಂಜೀವಿ ಸರ್ಜಾ ಅವರ ಸಮಾಧಿ ನಿರ್ವಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಕನಕಪುರ ರಸ್ತೆಯಲ್ಲಿರುವ ಧ್ರುವ ಸರ್ಜಾ ಒಡೆತನದ ಬೃಂದಾವನ ಫಾರ್ಮ್​ ಹೌಸ್​ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಇದೀಗ ಅದೇ ಜಾಗದಲ್ಲಿ ಸಮಾಧಿ ನಿರ್ವಣಕ್ಕೆ ಇಡೀ ಕುಟುಂಬಸ್ಥರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶನಿವಾರ ಬೆಳಗ್ಗೆ ಧ್ರುವ ಸರ್ಜಾ, ಪತ್ನಿ ಪ್ರೇರಣಾ, ಧ್ರುವ ತಂದೆ- ತಾಯಿ ಮತ್ತು ಅಜ್ಜಿ ಲಕ್ಷ್ಮೀದೇವಿ ಸೇರಿ ಕೆಲ ಆಪ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೂ. 7ರಂದು ಹೃದಯಾಘಾತದಿಂದ ಚಿರು ಸಾವನ್ನಪ್ಪಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net