'ರಾಣಾ' ಚಿತ್ರದ 'ಗಲ್ಲಿ ಬಾಯ್' ಹಾಡು ಐದು ಲಕ್ಷ ವೀಕ್ಷಣೆ ...

Raana - Gully Boy (1)
Published on

ಬೆಂಗಳೂರು: ಶ್ರೇಯಸ್​ ಮಂಜು ಅಭಿನಯದ 'ರಾಣಾ' ಚಿತ್ರದ 'ಗಲ್ಲಿ ಬಾಯ್' ಹಾಡನ್ನು ಇತ್ತೀಚೆಗಷ್ಟೇ 'ಜೋಗಿ' ಪ್ರೇಮ್ ಬಿಡುಗಡೆ ಮಾಡಿದ್ದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಐದು ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಕಂಡಿದೆ.

'ಗಲ್ಲಿ ಬಾಯ್​' ಹಾಡಿನ ಕುರಿತು ಮಾತನಾಡುವ ಶ್ರೇಯಸ್​ ಮಂಜು, 'ಚಂದನ್ ಶೆಟ್ಟಿ ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ' ಎನ್ನುತ್ತಾರೆ.

ನಾಯಕಿ ರೀಷ್ಮಾ ಸಹ ಈ ಹಾಡಿನ ಬಗ್ಗೆ ಬಹಳ ಖುಷಿಯಾಗಿದ್ದಾರೆ. 'ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತ್ತಾಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ' ಎನ್ನುತ್ತಾರೆ ರೀಷ್ಮಾ ನಾಣಯ್ಯ.

'ರಾಣ' ಒಂದು ಕೌಟುಂಬಿಕ ಚಿತ್ರವಾಗಿದ್ದು, ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆ ಈ ಚಿತ್ರದಲ್ಲಿದೆಯಂತೆ. ನಂದಕಿಶೋರ್​ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವನ್ನು ಗುಜ್ಜಲ್​ ಟಾಕೀಸ್​ನಡಿ ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡಿದ್ದಾರೆ. ಶ್ರೇಯಸ್​ ಮತ್ತು ರೀಷ್ಮಾ ಜತೆಗೆ ಸಂಯುಕ್ತಾ ಹೆಗ್ಡೆ, ಕೋಟೆ ಪ್ರಭಾಕರ್ ಮುಂತಾದವರು ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net