ಟಾಲಿವುಡ್ ಅಂಗಳದಲ್ಲಿ ಹಾಸ್ಟೆಲ್ ಹುಡುಗರು; ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ

boys hostel
Published on

ಬೆಂಗಳೂರು: ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕಳೆದ ತಿಂಗಳ 21ರಂದು ರಿಲೀಸ್ ಆಗಿ, ಉತ್ತಮ ಪ್ರದರ್ಶನ ಕಾಣುತ್ತಿದೆ. ಬಹುತೇಕ ಹೊಸಬರ ತಂಡ ಸೇರಿ ಮಾಡಿದ್ದ ಸಿನಿಮಾ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ ಕಥೆ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಜತೆಗೆ ಇದೊಂದು ಪ್ರತಿಭಾನ್ವಿತರ ತಂಡ ಎಂದು ಕನ್ನಡ ಚಿತ್ರರಂಗದ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಡಾಲಿ ಧನಂಜಯ, ರಾಜ್ ಬಿ. ಶೆಟ್ಟಿ, ರಕ್ಷಿತ್ ಶೆಟ್ಟಿ, ರಮೇಶ್ ಆರವಿಂದ್ ಸೇರಿ ಅನೇಕ ಗಣ್ಯರು ಚಿತ್ರತಂಡಕ್ಕೆ ಬೆನ್ನು ತಟ್ಟಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣದಲ್ಲಿ ಮೂಡಿಬಂದರುವ ಚಿತ್ರವಿದು.

ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಇದೀಗ ಟಾಲಿವುಡ್ ಅಂಗಳಕ್ಕೆ ಎಂಟ್ರಿಯಾಗಲು ರೆಡಿಯಾಗಿದೆ. ‘ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಲ್ಲಿ ತೆಲುಗಿಗೆ ಡಬ್ ಆಗುತ್ತಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ, ಚಿತ್ರ ಇದೇ ತಿಂಗಳ 26ಕ್ಕೆ ಬಿಡುಗಡೆ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net