ಅಂದಹಾಗೆ, ದಳಪತಿ ವಿಜಯ್ ನಾಯಕರಾಗಿರುವ 'ಜನನಾಯಕನ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಎಚ್. ವಿನೋದ್ ನಿರ್ದೇಶಿಸುತ್ತಿದ್ದು, ಪೂಜಾ ಹೆಗ್ಡೆ ಈ ಚಿತ್ರದ ನಾಯಕಿಯಾಗಿದ್ದಾರೆ. ಇವರೊಂದಿಗೆ ಬಾಲಿವುಡ್ ತಾರೆ ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರೆ, ಜಗದೀಶ್ ಪಳನಿಸಾಮಿ ಮತ್ತು ಲೋಹಿತ್ ಎನ್.ಕೆ ಸಹ-ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಸತ್ಯನ್ ಸೂರ್ಯನ್ ಅವರ ಛಾಯಾಗ್ರಹಣ ಹಾಗೂ ಅನಲ್ ಅರಸು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.