ನಟಿ ಕಂಗನಾ ರಣಾವತ್​ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಜಾವೇದ್ ಅಖ್ತರ್

Kangna
Published on

ಮುಂಬೈ: ನಟಿ ಕಂಗನಾ ರಣಾವತ್​ ವಿರುದ್ಧ ಬಾಲಿವುಡ್​ನ ಹಿರಿಯ ಸಾಹಿತಿ ಜಾವೇದ್​ ಅಖ್ತರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸುಖಾಸುಮ್ಮನೆ ಕಂಗನಾ ನನ್ನ ಹೆಸರನ್ನು ಬಳಸಿದ್ದರು. ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಮಾನಹಾನಿ ಮಾಡಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ.

ಕಳೆದ ಆರು ತಿಂಗಳಿಂದ ಬಾಲಿವುಡ್​ನಲ್ಲಿ ಕಂಗನಾ ತಮ್ಮ ತರಹೇವಾರಿ ಹೇಳಿಕೆಗಳ ಮೂಲಕವೇ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರು.ಬಾಲಿವುಡ್​ನ ಬಹುತೇಕ ಎಲ್ಲ ಕಲಾವಿದರಿಗೆ ಮಾತಿನ ಮೂಲಕವೇ ಚಾಟಿ ಬೀಸಿದ್ದರು.

ಈಗಾಗಲೇ ಮಹಾರಾಷ್ಟ್ರ ಸರ್ಕಾರ ಮತ್ತು ಒಂದಷ್ಟು ಬಾಲಿವುಡ್​ನ ಸ್ಟಾರ್ ನಟರಿಂದಲೂ ಕೆಂಗೆಣ್ಣಿಗೆ ಗುರಿಯಾಗಿರುವ ಕಂಗನಾ ವಿರುದ್ಧ ಹಲವರು ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ತುಮಕೂರಿನಲ್ಲಿಯೂ ಕಂಗನಾ ವಿರುದ್ಧ ವಕೀಲರೊಬ್ಬರು ದೂರು ನೀಡಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net