ಎರಡನೇ ಮದುವೆಗೆ ಸಜ್ಜಾದ ಜೊತೆ ಜೊತೆಯಲ್ಲಿ ಖ್ಯಾತಿಯ Meera; ಅಪರಾಧ ಎನಿಸುತ್ತಿಲ್ಲ, ಆದ್ರೆ ಕೃತಜ್ಞತೆ ಮಾತ್ರ ಇದೆ ಎಂದ ನಟಿ

Manasa Preetham
Published on

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಬ್ಲಾಕ್​ಬಸ್ಟರ್​ ಸೀರಿಯಲ್​ ಜೊತೆ ಜೊತೆಯಲ್ಲಿ ವೀಕ್ಷಕರಿಗೆ ಅಚ್ಚುಮೆಚ್ಚಾಗಿತ್ತು.  ಧಾರವಾಹಿಯ ನಾಯಕಿ ಅನು (Anu) (ಮೇಘ ಶೆಟ್ಟಿ) ಜೊತೆ ಮೀರಾ (Meera) (ಮಾನಸ ಮನೋಹರ್​) ಪಾತ್ರ ಕೂಡ ಪ್ರೇಕ್ಷಕರಿಗೆ ಅಚ್ಚುಮೆಚ್ಚಾಗಿತ್ತು. ಇದೀಗ ಮೀರಾ (Meera) ಪಾತ್ರಧಾರಿ ಮಾನಸ ಮನೋಹರ್​ ತಮ್ಮ ಫ್ಯಾನ್ಸ್​ಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಧಾರಾವಾಹಿಗಳಲ್ಲಿ ಬ್ಯುಸಿಯಿರುವ ಮಾಸನ (Manasa) ಪ್ರೀತಮ್​ ಚಂದ್ರ (Preetham Chandra) ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಭಾವಿ ಪತಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಮಾನಸ ಅವರಿಗೆ ಇದು ಎರಡನೇ ಮದುವೆ (Second Marriage) ಎಂದು ಹೇಳಲಾಗಿದ್ದು, ಈ ಬಗ್ಗೆ ನಟಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪೋಸ್ಟ್​ ಮಾಡಿರುವ ನಟಿ, ಎಲ್ಲರ ಸಂದೇಹಗಳಿಗೆ ಉತ್ತರ ಇದೆ. ಇದು ನನ್ನ ಎರಡನೇ ಮದುವೆ. ಕೆಲವು ಬಾರಿ ದೈಹಿಕವಾಗಿ ಮದುವೆಯಾಗುತ್ತೇವೆ ಆದರೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿರುವುದಿಲ್ಲ. ನಾವು ಎಲ್ಲರ ಒಳಿತಿಗಾಗಿ ಮುಂದುವರಿಯಬೇಕು. ನಾವು ಮದುವೆಯಾಗುತ್ತಿದ್ದೇವೆ. ನನಗೆ ಯಾವುದೇ ಅಪರಾಧ ಎನಿಸುತ್ತಿಲ್ಲ. ಆದರೆ ಕೃತಜ್ಞತೆ ಮಾತ್ರ ಇದೆ. ಆದ್ದರಿಂದ ಅದನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ನೆಟ್ಟಿಗರೊಬ್ಬರ ಕಾಮೆಂಟ್‌ಗೆ ನಟಿ ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್ನೂ ಮಾನಸ ಭಾವಿ ಪತಿ ಪ್ರೀತಮ್ ಚಂದ್ರ ಅವರು ಫುಟ್​ಬಾಲ್ ಪ್ಲೇಯರ್ ಆಗಿದ್ದಾರೆ. ಅವರು ಫುಟ್ ಬಾಲ್ ಅಕಾಡೆಮಿ ಕೂಡ ನಡೆಸುತ್ತಿದ್ದಾರೆ. ಸದ್ಯದಲ್ಲೇ ಮಾನಸ ಮತ್ತು ಪ್ರೀತಮ್‌ ಮದುವೆ ಜರುಗಲಿದೆ. ಸದ್ಯ ಲಕ್ಷ್ಮೀ ನಿವಾಸ ಹಾಗೂ ಶಾಂಭವಿ ಧಾರವಾಹಿಯಲ್ಲಿ ಮಾಸನ ಬ್ಯುಸಿಯಿದ್ದು, ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net