

ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಮದುವೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ಅದ್ಯಾವ ಮಟ್ಟಿಗೆ ಅಂದರೆ, ಮುಂದಿನ ಐದು ವರ್ಷದಲ್ಲಿ ಮದುವೆಯಾಗಿ ಮಕ್ಕಳನ್ನೂ ಮಾಡಿಕೊಳ್ಳಲಿದ್ದಾರಂತೆ. ಹೀಗಂತ ಸ್ವತಃ ಕಂಗನಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಆಗಾಗ ಮದುವೆ ಯಾವಾಗ ಎಂಬ ಮಾತು ಕೇಳಿಬಂದರೂ ಕಂಗನಾ ಮಾತ್ರ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಕೊನೆಗೂ ಮದುವೆ ಬಗ್ಗೆ ತುಟಿ ಬಿಚ್ಚಿದ್ದಾರೆ. ‘ನಾನೂ ಮದುವೆಯಾಗಬೇಕು, ಮಕ್ಕಳನ್ನು ಮಾಡಿಕೊಳ್ಳಬೇಕೆಂಬ ಆಸೆ ಇದೆ. ಮುಂದಿನ ಐದು ವರ್ಷದಲ್ಲಿ ಹೆಂಡತಿಯಾಗಿ ತಾಯಿಯಾಗಿಯೂ ನನ್ನನ್ನು ನಾನು ಕಂಡುಕೊಳ್ಳಬೇಕು’ ಎಂದಿದ್ದಾರೆ. ಆದರೆ ಮದುವೆಯಾಗುವ ಹುಡುಗ ಯಾರು ಎಂಬುದನ್ನು ಮಾತ್ರ ಗೌಪ್ಯವಾಗಿಟ್ಟಿದ್ದಾರೆ. (ಏಜೆನ್ಸೀಸ್)