ನಟ ಧನಂಜಯ್​ಗೆ ಕೂಡಿಬಂತು ಕಂಕಣ ಭಾಗ್ಯ! ಇವರೇ ನೋಡಿ ಡಾಲಿ ಮನಗೆದ್ದ ಬ್ಯೂಟಿ, ಮದ್ವೆ ಯಾವಾಗ? Daali dhananjay Marriage

Daali dhananjay Marriage
Published on

Daali dhananjay Marriage : ಚಂದನವನದ ನಟ ರಾಕ್ಷಸ, ಅಭಿಮಾನಿಗಳ ಪ್ರೀತಿಯ ಡಾಲಿ ಧನಂಜಯ್​ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ವೈದ್ಯೆಯ ಜತೆ ಹಸೆಮಣೆ ಏರಲು ಸ್ಯಾಂಡಲ್​ವುಡ್​ ಸ್ಟಾರ್​ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಭಾವಿ ಪತ್ನಿಯೊಂದಿಗೆ ನಟ ಧನಂಜಯ್​ ಫೋಟೋಶೂಟ್​ ಕೂಡ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Daali dhananjay Marriage

ಹೌದು, ಧನಂಜಯ್​ ಅವರು ಮದುವೆಗೆ ರೆಡಿಯಾಗಿದ್ದಾರಂತೆ. ಮದುವೆ ಅಂದ ಮೇಲೆ ವಧು ಯಾರೆಂಬ ಪ್ರಶ್ನೆ ನಿಮ್ಮ ತಲೆಗೆ ಬಂದೇ ಬಂದಿರುತ್ತದೆ. ಡಾಲಿ ವರಿಸಲಿರುವ ವಧುವಿನ ಹೆಸರು ಧನ್ಯತಾ ಎಂದು ತಿಳಿದುಬಂದಿದೆ. ಇವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಚಿತ್ರದುರ್ಗ ಮೂಲದವರು.

Daali dhananjay Marriage

ಕೆಲವು ವರ್ಷಗಳಿಂದ ಧನಂಜಯ ಹಾಗೂ ಡಾ. ಧನ್ಯತಾ ಸ್ನೇಹಿತರಾಗಿದ್ದರು. ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಮದುವೆ ಮೂಲಕ ಜೀವನದಲ್ಲಿ ಒಟ್ಟಿಗೆ ಹೆಜ್ಜೆ ಹಾಕಲು ನಿರ್ಧರಿಸಿದ್ದಾರೆ. ಇಬ್ಬರ ಪ್ರೀತಿಯನ್ನು ಎರಡೂ ಕುಟುಂಬಗಳು ಒಪ್ಪಿಕೊಂಡಿವೆ ಎಂದು ಹೇಳಲಾಗಿದೆ.

Daali dhananjay Marriage

ಮುಂದಿನ ವರ್ಷ ಅಂದರೆ, 2025ರ ಫೆಬ್ರವರಿ ತಿಂಗಳಲ್ಲಿ ಮದುವೆ ಆಗಲು ಡಾಲಿ ಧನಂಜಯ್​ ಸಿದ್ಧತೆ ಮಾಡಿಕೊಂಡಿದ್ದಾರೆ. ಅಂದಹಾಗೆ ಡಾ. ಧನ್ಯತಾ ಅವರು ಗೈನಕಾಲಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಂದಹಾಗೆ ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ ಮತ್ತು ಓದಿದ್ದು ಮೈಸೂರಿನಲ್ಲಿ. ಅರಸಿಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಧನಂಜಯ್​ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ. ಧನ್ಯತಾ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.

Daali dhananjay Marriage

ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.

Daali dhananjay Marriage

ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಸದ್ಯ ಗುಡ್ ನ್ಯೂಸ್ ನೀಡಿರುವ ಧನಂಜಯ ಅವರಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net