ಹಿರಿಯ ಪೋಷಕ ನಟಿ ಬಿ.ಜಯಾ ಇನ್ನಿಲ್ಲ! ಕಣ್ಣೀರ ಕಡಲಲ್ಲಿ ಚಿತ್ರರಂಗ

b jaya
Published on

ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ.

ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು.

1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಅಣ್ಣಾವ್ರ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. 6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿದೆ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ.

ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಹಲವಾರು ದಿಗ್ಗಜ ನಟರ ಜತೆ ಅಭಿನಯಸಿದ್ದ ಹಿರಿಯ ನಟಿಯನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net