ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ 'ದಾರಿ ಯಾವುದಯ್ಯ ವೈಕುಂಠಕೆ' ಚಿತ್ರ ಪ್ರದರ್ಶನ

collage (4)
Published on

ಬೆಂಗಳೂರು: ಇತ್ತೀಚೆಗೆ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಬರುತ್ತಿವೆ.‌ ಅದರಲ್ಲಿ "ದಾರಿ ಯಾವುದಯ್ಯ ವೈಕುಂಠಕೆ" ಚಿತ್ರವು ಒಂದು.‌ ಇದೀಗ ಇದೇ ಚಿತ್ರತಂಡದಿಂದ ಸಂತಸದ ಸುದ್ದಿಯೊಂದು ಹೊರಬಂದಿದೆ.‌ ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ದಾರಿ ಯಾವುದಯ್ಯ ವೈಕುಂಠಕೆ‘ ಚಿತ್ರ ಬರೋಬ್ಬರಿ 6 ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ.

ರಾಜಸ್ಥಾನ ಅಂತಾರಾಷ್ಟ್ರೀಯ ಚಿತ್ರೋತ್ಸವ, ಕಲರ್ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್, 5th ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್, ಇಂಡಿಯನ್ ಇಂಟರ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸೇರಿ ‍6 ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಈ ಚಿತ್ರ ಆಯ್ಕೆಯಾಗಿದ್ದು, ಶೀಘ್ರದಲ್ಲಿ ಪ್ರದರ್ಶನವಾಗಲಿದೆ. ಇನ್ನೇನು ಶೀಘ್ರದಲ್ಲಿ ಚಿತ್ರಮಂದಿರಗಳಲ್ಲಿಯೂ ಬಿಡುಗಡೆ ಆಗಲಿದೆ.

ದೊಡ್ಡ ಕ್ರಿಮಿನಲ್ ವ್ಯಕ್ತಿಗೆ ಭಾವನೆಗಳ ಸ್ಪರ್ಶ ಕೊಟ್ಟರೆ ಅವನಲ್ಲಾಗುವ ಮಾನಸಿಕ ಬದಲಾಣೆಗಳ ಕ್ರೂಡಿಕರಣವೇ ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರದ ಕಥಾಸಾರಾಂಶ. ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ನಿರ್ಮಿಸಿರುವ ಈ ಚಿತ್ರವನ್ನು ಸಿದ್ದು ಪೂರ್ಣಚಂದ್ರ ನಿರ್ದೇಶಿಸಿದ್ದಾರೆ.

ವರ್ಧನ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಅನುಷ, 'ತಿಥಿ' ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸೆರಿ ಹಲವರಿದ್ದಾರೆ. ಮುಂತಾದವರಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net