

ಬೆಂಗಳೂರು: ಫ್ರಾನ್ಸ್ನಲ್ಲಿ ನಡೆಯುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ ಕನ್ನಡದ ‘ದೇವರ ಕನಸು’ ಸಿನಿಮಾ ಆಯ್ಕೆಯಾಗಿದೆ. ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ವಣವಾಗಿರುವ ಈ ಚಿತ್ರವನ್ನು ಸುರೇಶ್ ಲಕ್ಕೂರ್ ನಿರ್ದೇಶನ ಮಾಡಿದ್ದಾರೆ.
ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎಂಬುದೇ ‘ದೇವರ ಕನಸು’ ಚಿತ್ರದ ಎಳೆ.
‘ದೇವರ ಕನಸು’ ಸಿನಿಮಾದ ವಿಶೇಷತೆ ಏನೆಂದರೆ ಈ ಚಿತ್ರಕ್ಕೆ ಪ್ಯಾನ್ ಇಂಡಿಯಾ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರತ್ನಜಿತ್ ರಾಯ್ ಛಾಯಾಗ್ರಹಣ, ಜಿಷ್ನು ಸೇನ್ ಸಂಕಲನ ಮಾಡಿದ್ದಾರೆ. ಚೈನ್ನೈ ಮೂಲದ ನಿತ್ಯಾನಂದ, ಸುಂದರ್ ಅವರ ಸಂಗೀತ ಈ ಚಿತ್ರಕ್ಕಿದೆ. ಲಿಂಗರಾಜ್ ಇತಿಹಾಸ್ ಸಂಭಾಷಣೆ ಮತ್ತು ಸಾಹಿತ್ಯ ಬರೆದಿದ್ದಾರೆ. ಸಿ. ಜಯಕುಮಾರ್, ಶೇಖರ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ದೀಪಕ್, ಅಮೂಲ್ಯ, ಯುವರಾಜ್, ಆರುಷಿ ಮುಖ್ಯಭೂಮಿಕೆ ಯಲ್ಲಿದ್ದಾರೆ.