ಕರಿಕಾನು ಗುಡ್ಡದ ಮೇಲೆ ಪ್ರಮೋದ್; ಹುಟ್ಟುಹಬ್ಬಕ್ಕೆ ಚಿತ್ರತಂಡದ ಪೋಸ್ಟರ್ ಉಡುಗೊರೆ

pramod shetty
Published on

ಬೆಂಗಳೂರು: ‘ಉಳಿದವರು ಕಂಡಂತೆ’, ‘ಕಿರಿಕ್ ಪಾರ್ಟಿ’, ‘ರಿಕ್ಕಿ’, ‘ಬೆಲ್ ಬಾಟಂ’, ‘ಅವನೇ ಶ್ರೀಮನ್ನಾರಾಯಣ’, ‘ತೂತುಮಡಿಕೆ’, ‘ಕಾಂತಾರ’ ಹೀಗೆ ಹಲವು ಸಿನಿಮಾಗಳಲ್ಲಿ ಮಿಂಚಿರುವ ಖ್ಯಾತಿ ಪ್ರಮೋದ್ ಶೆಟ್ಟಿಗೆ ಸಲ್ಲುತ್ತದೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಮೋದ್‌ಗೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರತಂಡ ಪೋಸ್ಟರ್ ಮೂಲಕ ಶುಭಾಶಯ ಕೋರಿದೆ.

ಒಂದು ಊರಿನಲ್ಲಿ ಅಪಾರ್ಥದಿಂದ ಅನಾಹುತವಾಗಿ, ಅನಾಹುತವು ಅಧಿಕ ಪ್ರಸಂಗವಾಗುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಯುವ ಪ್ರತಿಭೆ ಅನೀಶ್ ಶರ್ಮ ಈ ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ. ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆಜಿ ಕೃಷ್ಣಮೂರ್ತಿ, ಚಂದ್ರಕಲಾ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸುಮಂತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಚಿತ್ರಕ್ಕಿರಲಿದೆ.

ಈಗಾಗಲೇ ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬಿಜಿಯಾಗಿದೆ. ಇದರ ಜತೆಗೆ ಪ್ರಮೋದ್ ಶೆಟ್ಟಿ, ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲು ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net