

ಬೆಂಗಳೂರು: ಚಿತ್ರರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಲಸಿಕೆ ವಿತರಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸಾವಿರಾರು ಜನ ಕಾರ್ಮಿಕರು, ತಂತ್ರಜ್ಱರು ಮತ್ತು ಕಲಾವಿದರು ಇದ್ದು, ಅದರಲ್ಲಿ ಬಹಳಷ್ಟು ಜನರಿಗೆ ಇನ್ನೂ ಲಸಿಕೆ ಸಿಕ್ಕಿಲ್ಲ. ಅವರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಲಸಿಕೆ ವಿತರಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪರವಾಗಿ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿರುವ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜತೆಗೆ ಸಮಾಲೋಚನೆ ನಡೆಸಿ, ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಡಳಿಯ ಉಪಾಧ್ಯಕ್ಷ ನಾಗಣ್ಣ, ಕಾರ್ಯದರ್ಶಿ ಸಫೈರ್ ವೆಂಕಟೇಶ್ ಮತ್ತು ವೀರೇಶ್ ಸಹ ಇದ್ದರು.