

ಬೆಂಗಳೂರು: ‘ಕಡಲತೀರದ ಭಾರ್ಗವ’ ಖ್ಯಾತಿಯ ನಿರ್ದೇಶಕ ಪನ್ನಗ ಆ್ಯಕ್ಷನ್-ಕಟ್ ಹೇಳುತ್ತಿರುವ ಹೊಸ ಚಿತ್ರ ‘ಕೆಂದಾವರೆ’. ಗೌರಿ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ ಕೆಲವು ಆಲ್ಬಂ ಸಾಂಗ್‌ಗಳಲ್ಲಿ ನಟಿಸಿರುವ ಆದಿತ್ಯ ವಿನೋದ್ ಈ ಸಿನಿಮಾ ಮೂಲಕ ಚಂದನವನಕ್ಕೆ ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಸಿನಿಮಾ ಎನ್ನಲಾಗಿದೆ. ಉಳಿದಂತೆ ಚಿತ್ರಕ್ಕೆ ಹಿತಾಂಶು ಸಂಗೀತ ನೀಡಲಿದ್ದಾರೆ. ಜತೆಗೆ ಕೀರ್ತನ್ ಪೂಜಾರಿ ಛಾಯಾಗ್ರಹಣವಿರಲಿದೆ.
ನವೆಂಬರ್‌ನಿಂದ ಶೂಟಿಂಗ್ ಶುರು ಆಗಲಿದ್ದು, ಹುಬ್ಬಳ್ಳಿ, ಕಾರ್ಕಳ, ಸಾಗರ ಸೇರಿ ಹಲವು ಸ್ಥಳಗಳಲ್ಲಿ ಚಿತ್ರೀಕರಣ ನಡೆಸುವ ಆಲೋಚನೆ ಚಿತ್ರತಂಡದ್ದು.