

ಬೆಂಗಳೂರು: ‘ಕೆಜಿಎಫ್ 2’ ಚಿತ್ರದ ಬಿಡುಗಡೆಗೆ ಇನ್ನೆರಡು ತಿಂಗಳುಗಳು ಮಾತ್ರ ಉಳಿದಿವೆ. ಚಿತ್ರವು ಏಪ್ರಿಲ್ 14ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಕೆಲಸಗಳು ಭರದಿಂದ ಸಾಗಿದ್ದು, ರವೀನಾ ಟಂಡನ್ ಮತ್ತು ಶ್ರೀನಿಧಿ ಶೆಟ್ಟಿ ಸಹ ತಮ್ಮ ಡಬ್ಬಿಂಗ್ ಮುಗಿಸಿದ್ದಾರೆ. ರವೀನಾ ಟಂಡನ್ ಚಿತ್ರದ ಡಬ್ಬಿಂಗ್ ಮುಗಿಸಿರುವ ವಿಷಯವನ್ನು ಸ್ವತಃ ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದಾರೆ.
‘ನಮ್ಮ ಕೂಲ್ ಪ್ರಧಾನ ಮಂತ್ರಿ ರಮಿಕಾ ಸೇನ್ ಅವರ ಡಬ್ಬಿಂಗ್ ಮುಗಿಯಿತು’ ಎಂದು ಅವರು ಫೋಟೋ ಹಂಚಿಕೊಂಡಿದ್ದಾರೆ. ಇನ್ನು ಎರಡು ದಿನಗಳ ಹಿಂದೆ, ನಾಯಕಿ ಶ್ರೀನಿಧಿ ಶೆಟ್ಟಿ ಸಹ ತಮ್ಮ ಡಬ್ಬಿಂಗ್ ಮುಗಿದಿದ್ದಾಗಿ ಹೇಳಿಕೊಂಡಿದ್ದರು.