'ಕೆಜಿಎಫ್ 2' ಸಿನಿಮಾದ ಬಹುನಿರೀಕ್ಷಿತ ಟ್ರೈಲರ್ ಕೊನೆಗೂ ಮಾ. 27 ರಂದು ಸಂಜೆ ರಿಲೀಸ್ ಆಗಿದೆ. ಮೊದಲೆ, 'ಕೆಜಿಎಫ್' ಸಿನಿಮಾ ನೋಡಿದ ಎಲ್ಲರೂ 'ಕೆಜಿಎಫ್ 2' ನೋಡಲು ತುದಿಗಾಲಲ್ಲಿ ನಿಂತಿದ್ದರು. ಇದೀಗ, ನಿನ್ನೆ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್ ಸಿನಿಪ್ರಿಯರಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಹೌದು, ಚಿತ್ರದ ಟ್ರೈಲರ್ ನೋಡಿ ಅಭಿಮಾನಿಗಳು ಫುಲ್ ಖುಷಿ ಆಗಿದ್ದು, ಅದು ರಿಲೀಸ್ ಆದ ಕೆಲವೇ ಗಂಟೆಯಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಕೋಟಿ ಕೋಟಿ ವೀಕ್ಷಣೆಗಳನ್ನು ಪಡೆಯುತ್ತಿದೆ. ಐದು ಭಾಷೆಗಳಲ್ಲಿ 'ಕೆಜಿಎಫ್ 2' ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಎಲ್ಲಾ ಭಾಷೆಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.