ಕಿರಣ್​ ರಾಜ್​ ಅಭಿನಯದ 'ರಾನಿ' ; ಟಿ-ಸಿರೀಸ್​ ಪಾಲಾಯಿತು ಆಡಿಯೋ ರೈಟ್ಸ್​

WhatsApp Image 2023-08-17 at 9.01.09 AM
Published on

ವಿಜಯವಾಣಿ ಸುದ್ದಿಜಾಲ

ಕಿರುತೆರೆ ಸ್ಟಾರ್​ ಕಿರಣ್​ ರಾಜ್​ ಅಭಿನಯದ ಚಿತ್ರ 'ರಾನಿ'. ಇತ್ತೀಚೆಗಷ್ಟೆ ಚಿತ್ರದ ಟೀಸರ್​ ಬಿಡುಗಡೆಯಾಗಿದ್ದು, ವೈರಲ್​ ಆಗಿತ್ತು. ಕಿರಣ್​ ರಾಜ್​ ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಮಣಿಕಾಂತ್ ಕದ್ರಿ ಚಿತ್ರಕ್ಕೆ 5 ಹಾಡುಗಳನ್ನು ಸಂಯೋಜಿಸಿದ್ದು, “ಕಾಂತಾರ ”ಖ್ಯಾತಿಯ ಪ್ರಮೋದ್ ಮರವಂತೆ 5 ಹಾಡುಗಳನ್ನು ಬರೆದಿದ್ದಾರೆ. ಕುನಾಲ್ ಗಾಂಜಾವಾಲ, ಹಂಸಿಕ ಐಯ್ಯರ್, ಶ್ವೇತಾ ಮೋಹನ್ ಅವರಂತಹ ಹೆಸರಾಂತ ಗಾಯಕರು ರಾನಿ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗಾಗಲೇ ಕನ್ನಡ ಮಾರುಕಟ್ಟೆ ಪ್ರವೇಶಿಸಿರುವ ಬಾಲಿವುಡ್​ನ ಟಿ-ಸಿರೀಸ್​ ಸಂಸ್ಥೆ ರಾನಿ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರಿ ಮೊತ್ತಕ್ಕೆ ಖರೀದಿಸಿದೆ ಎನ್ನಲಾಗಿದೆ.

ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ ನಾಯಕನಾಗಿ “ಕಿರಣ್ ರಾಜ್ ”ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು 85 ದಿನಗಳ ಚಿತ್ರೀಕರಣ ಮುಗಿದಿದ್ದು ಒಂದು ಹಾಡಿನ ಚಿತ್ರಿಕರಣ ಬಾಕಿ ಇದೆ. ಗ್ಯಾಂಗ್​ಸ್ಟರ್ ಕಥೆಯಾದರೂ ಮಾಸ್ ಎಲಿವೆಷನ್ ಇದ್ದರು ಕಿರಣ್ ರಾಜ್ ರವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದೇನೆ ಇದು ಫ್ಯಾಮಿಲಿ ಆಕ್ಷನ್ ಸಿನಿಮಾ' ಎನ್ನುತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

ಚಿತ್ರದಲ್ಲಿ ಸಮೀಕ್ಷ, ಅಪೂರ್ವ ಹಾಗೂ ರಾಧ್ಯಾ ಮೂವರು ನಾಯಕಿಯರಿದ್ದು, ಪೋಷಕ ಪಾತ್ರದಲ್ಲಿ ರವಿಶಂಕರ್, ಮಂಜು, ಉಗ್ರಂ ರವಿ, ಗಿರೀಶ್ ಹೆಗಡೆ, ಬೇಡ ಸುರೇಶ, ಮೈಕೋ ನಾಗರಾಜ್, ಸುಜಯ್ ಶಾಸ್ತ್ರಿ, ಲಕ್ಷ್ಮೀ ಸಿದ್ದಯ್ಯ, ಅನಿಲ್ ಯಾದವ್, ಶ್ರೀಧರ್,ಮಂಡ್ಯ ರಮೇಶ್ ಹೀಗೆ ದೊಡ್ಡ ತಾರಬಳಗವಿದೆ. ರಾಘವೇಂದ್ರ ಬೇಡ ಕೋಲಾರ ಛಾಯಾಗ್ರಾಹಣ, ಉಮೇಶ್ ಸಂಕಲನ ಸತೀಶ್ ಕಲಾ ನಿರ್ದೇಶನ ಧನಂಜಯ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದ್ದು, ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರ ತಂಡ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net