

ಕಾಲಿವುಡ್ ನಟ ವಿಶಾಲ್ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ವಿಶಾಲ್ ಫಿಲಂ ಫ್ಯಾಕ್ಟರಿ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಹಲವು ಸಿನಿಮಾಗಳು ಸಿದ್ಧವಾಗಿವೆ. ಇದೀಗ ಇದೇ ವಿಶಾಲ್ ಫಿಲಂ ಫ್ಯಾಕ್ಟರಿ ಮಹಿಳಾ ಉದ್ಯೋಗಿಯೊಬ್ಬರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಸಂಸ್ಥೆಯ ಮ್ಯಾನೇಜರ್ ಹರಿ ಎಂಬುವವರು ವಡಾಪಳನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕಳೆದ ಆರು ವರ್ಷಗಳಿಂದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಒಟ್ಟು 45 ಲಕ್ಷ ರೂ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ಸಂಸ್ಥೆಯ ಮಹಿಳಾ ಉದ್ಯೋಗಿ 45 ಲಕ್ಷ ಮೊತ್ತ ನೀಡಿ ಮನೆ ಖರೀದಿಸಿದ್ದರು. ಈ ಖರೀದಿಯ ಬಗ್ಗೆ ಅನುಮಾನಗೊಂಡ ಮ್ಯಾನೇಜರ್, ವಿಚಾರಣೆ ಮಾಡಿದ್ದಾರೆ. ಆ ವೇಳೆ ಸತ್ಯ ಬೆಳಕಿಗೆ ಬಂದಿದ್ದು, ದೂರು ನೀಡಿದ್ದಾರೆ.
ಇದನ್ನೂ ಓದಿ: ಚಾರ್ಲಿಗೆ ಜತೆಯಾದ ದಾನಿಶ್
ಇತ್ತೀಚೆಗಷ್ಟೇ ವಿಶಾಲ್ ನಾಯಕತ್ವದ ಚಕ್ರ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಕನ್ನಡ ಟ್ರೇಲರ್ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆಗೊಳಿಸಿದ್ದರು. (ಏಜೆನ್ಸೀಸ್)