ದೈವನರ್ತಕರೊಂದಿಗೆ ಕಾಂತಾರ ಸಿನಿಮಾ ವೀಕ್ಷಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ...

Kota Shrinivas Poojari
Published on

ಬೆಂಗಳೂರು: ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಸದ್ದು. ಚಿತ್ರ ಬಿಡುಗಡೆಯಾಗಿ ಎರಡು ವಾರ ಕಳೆದರೂ, ಸಿನಿಮಾ ಮಾತ್ರ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ವಿವಿಧ ಭಾಷೆಯ ನಟರು, ರಾಜಕಾರಣಿಗಳು, ಸಮಾಜದ ವಿವಿಧ ಗಣ್ಯ ವ್ಯಕ್ತಿಗಳು ಕಾಂತಾರ ಸಿನಿಮಾ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದೀಗ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ದೈವ ನರ್ತಕರೊಂದಿಗೆ ಸಿನಿಮಾ ವೀಕ್ಷಿಸಿರುವುದು ಮತ್ತೊಂದು ವಿಶೇಷ.

ದೀವಾವಳಿ ಹಬ್ಬದ ಹಿನ್ನಲೆಯಲ್ಲಿ ತಮ್ಮ ಊರಿನಲ್ಲಿದ್ದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರದಲ್ಲಿ ಚಿತ್ರಮಂದಿರಕ್ಕೆ ತೆರಳಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವ ನರ್ತಕರು ಹಾಗೂ ದರ್ಶನ ಪಾತ್ರಿಗಳು ಸಚಿವರನ್ನು ಸ್ವಾಗತಿಸಿದ್ದಾರೆ. ನಂತರ ಅವರ ಜೊತೆಗೆ ಕುಳಿತು ಸಿನಿಮಾ ನೋಡಿದ್ದಾರೆ.

ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಮೂಲಕ ಕಾಂತಾರ ಸಿನಿಮಾವನ್ನು ಅದ್ಭುತವಾಗಿ ಮೂಡಿ ಬಂದಿದೆ. ನಮ್ಮ ನಾಡಿನ ದೈವಾರಾಧನೆ, ಕಂಬಳ ಸಹಿತ ಜನಪದ ಸೊಗಡನ್ನು ಅಚ್ಚೊತ್ತಿದಂತೆ ತೆರೆಮೇಲೆ ತಂದಿರುವ ತಂಡಕ್ಕೆ ಅಭಿನಂದನೆಗಳು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net