ಕೋಟಿಗೊಬ್ಬ 3 ಟ್ರೇಲರ್ ಮೋಡಿ; ಎರಡೇ ದಿನದಲ್ಲಿ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ

Sudeep
Published on

ಬೆಂಗಳೂರು: ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಟ್ರೇಲರ್ ಬಿಡುಗಡೆ ಆಗಿ ಅಭಿಮಾನಿಗಳ ಮನತಣಿಸಿದೆ. ಇನ್ನೇನು ಇದೇ ತಿಂಗಳ 14ರ ದಸರಾ ಹಬ್ಬದ ಪ್ರಯುಕ್ತ ಸಿನಿಮಾ ರಿಲೀಸ್ ಆಗುತ್ತಿದ್ದು, ರಿಲೀಸ್ ಆದ ಎರಡೇ ದಿನದಲ್ಲಿ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಶಿವಕಾರ್ತಿಕ್ ನಿರ್ದೇಶನದ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ವಿುಸಿದ್ದಾರೆ. ಇತ್ತ ಎಸ್. ನಾರಾಯಣ್ ನಿರ್ದೇಶನದ ‘5ಡಿ’ ಚಿತ್ರದ ಟ್ರೇಲರ್ ಸಹ ಹೊರಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಈ ಚಿತ್ರದಲ್ಲಿ ಆದಿತ್ಯ ನಾಯಕನಾಗಿ ನಟಿಸಿದರೆ, ಅದಿತಿ ಪ್ರಭುದೇವ ನಾಯಕಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net