

ಬೆಂಗಳೂರು: ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ಸಂಘದ 45 ವರ್ಷ ಮೇಲ್ಪಟ್ಟ ಅಜೀವ ಸದಸ್ಯರು ಹಾಗೂ ಅವರ ಕುಟುಂಬದವರಿಗೆ ಮೂರು ದಿನಗಳ ಕಾಲ ಉಚಿತ ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: ಅನುಷ್ಕಾ ಮೇಲೆ ಕ್ರಶ್ ಆಗಿತ್ತಂತೆ ರಣಬೀರ್ಗೆ!
ಕೋವಿಡ್ ಲಸಿಕೆಗೆ ಸಾಕಷ್ಟು ಬೇಡಿಕೆ ಇದ್ದು, ಜನರು ಲಸಿಕೆ ಪಡೆದುಕೊಳ್ಳಲು ಕಷ್ಟಪಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ನಿಟ್ಟಿನಲ್ಲಿ ಸಂಘವು ಅಧ್ಯಕ್ಷ ಶಿವಕುಮಾರ್, ಕಂದಾಯ ಸಚಿವ ಆರ್. ಅಶೋಕ್ ಮತ್ತು ಬಿಬಿಎಂಪಿ ಸದಸ್ಯ ಲಕ್ಷ್ಮೀಕಾಂತ್ ಅವರ ಸಹಾಯದಿಂದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ ಕಲಾವಿದರು, ತಂತ್ರಜ್ಱರು, ಮತ್ತು ಅವರ ಕುಟುಂಬದವರಿಗೆ ಉಚಿತ ಲಸಿಕೆ ನೀಡುವಂತೆ ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಸರ್ಕಾರವು ಉಚಿತ ಲಸಿಕೆ ನೀಡಲು ಒಪ್ಪಿದ್ದು, ಅದರಂತೆ ಟೆಲಿವಿಷನ್ ಅಸೋಸಿಯೇಷನ್ನ 45 ವರ್ಷ ಮೇಲ್ಪಟ್ಟ ಎಲ್ಲ ಅಜೀವ ಸದಸ್ಯರು ಮೇ 18ರಿಂದ 20ರವರೆಗೂ ಉಚಿತವಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ. ಮಂಗಳವಾರ ಪ್ರಾರಂಭವಾದ ಹಲವು ಕಲಾವಿದರು ಹಾಗೂ ತಂತ್ರಜ್ಱರು ಲಸಿಕೆ ಪಡೆದಿದ್ದಾರೆ.
ಚಿತ್ರರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಲಸಿಕೆ ವಿತರಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಸೋಮವಾರವಷ್ಟೇ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದಕ್ಕೂ ಮೊದಲೇ ಕಿರುತೆರೆಯವರು ಲಸಿಕೆ ಪಡೆಯುವಲ್ಲಿ ಯಶ್ವಿಯಾಗಿದ್ದಾರೆ.