'ಲೈನ್ ಮ್ಯಾನ್' ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ‌ ...

Line Man 2
Published on

ಬೆಂಗಳೂರು: ವಿನಯ್​ ರಾಜಕುಮಾರ್​ ಅಭಿನಯದ 'ರನ್​ ಆಂಟೋನಿ' ಮತ್ತು ಮನೋಜ್​ ಅಭಿನಯದ 'ಟಕ್ಕರ್​' ಚಿತ್ರಗಳನ್ನು ನಿರ್ದೇಶಿಸಿದ್ದ ರಘು ಶಾಸ್ತ್ರಿ, ಈಗ ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಪ್ರಾರಂಭಿಸಿದ್ದಾರೆ. ಅದೇ 'ಲೈನ್​ ಮ್ಯಾನ್​'.

ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

ಹಳ್ಳಿಯ ಕಡೆ ದಿನ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್​ನಿಂದಾಗುವ ತೊಂದರೆ ಸರಿಪಡಿಸುವ 'ಲೈನ್ ಮ್ಯಾನ್' ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ 'ಲೈನ್ ಮ್ಯಾನ್' ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ನಿರ್ದೇಶನದ 'ಕೊಂಡ' ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ‌ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದು, ಶಾಂತಿ ಸಾಗರ್ ಛಾಯಾಗ್ರಹಣವಿದೆ. 'ಭಿನ್ನ'ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ "ಡಿಯರ್ ಸತ್ಯ' ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ 'ಲೈನ್ ಮ್ಯಾನ್' ಆರಂಭವಾಗಿದೆ. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net