

ಮುಂಬೈ: ರಾಜಕೀಯ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್ನ ನಟಿ ಕಂಗನಾ ರಣಾವತ್ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವವರನ್ನು ಜೈಲಿಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕಂಗನಾ, ದೇಶದಲ್ಲಿ ಜನಸಂಖ್ಯೆಯನ್ನು ನಿಯಂತ್ರಿಸಲು ಕಠಿಣ ಕ್ರಮ, ಕಾನೂನುಗಳನ್ನು ಜಾರಿಗೊಳಿಸಬೇಕಿದೆ. ನಮ್ಮಲ್ಲಿರುವ ವೋಟ್ ರಾಜಕೀಯದಿಂದ ನಾವು ಬೇಸತ್ತಿದ್ದೇವೆ. ಜನಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಬಲವಂತವಾಗಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸಲು ಮುಂದಾಗಿದ್ದರು. ಆದರೆ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಸದ್ಯದ ಬಿಕ್ಕಟ್ಟನ್ನು ಗಮನಿಸಿದರೆ ನಮ್ಮ ದೇಶದಲ್ಲಿ ಮೂರನೇ ಮಗು ಹೊಂದುವವರಿಗೆ ಜೈಲು ಶಿಕ್ಷೆ ವಿಧಿಸುವುದು ಅಥವಾ ದಂಡ ವಿಧಿಸುವ ಕಾನೂನಿನ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಕಂಗನಾ ಅವರ ಈ ಟ್ವೀಟ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಂಗನಾ ಅವರ ತಂದೆ ತಾಯಿಗೂ ಮೂರು ಕಂಗನಾ ಸೇರಿ ಒಟ್ಟು ಮೂರು ಮಕ್ಕಳಿದ್ದಾರೆ. ಈ ರೀತಿಯ ಕಾನೂನು ತರುವುದಾದರೆ ಮೊದಲು ಕಂಗನಾರ ಪೋಷಕರಿಗೆ ಶಿಕ್ಷೆಯಾಗಬೇಕು ಎಂದು ಕೆಲವರು ಕಾಲೆಳೆದಿದ್ದಾರೆ. (ಏಜೆನ್ಸೀಸ್)