

ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯವನ್ನೂ ಚಿತ್ರತಂಡ ಶುರುಮಾಡಿದೆ. ಅದರಂತೆ ಗುರುವಾರ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಆಗಿದ್ದು, ರಗಡ್ ಅವತಾರದಲ್ಲಿ ಶ್ರೀಮುರಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಹಾಡಿನ ಮೇಕಿಂಗ್ನಿಂದಲೇ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿರುವ ಈ ಚಿತ್ರ ಡಿ. 3ಕ್ಕೆ ಕನ್ನಡದ ಜತೆಗೆ ತೆಲುಗು, ತಮಿಳಿನಲ್ಲಿ ತೆರೆಗೆ ಬರಲಿದೆ. ‘ಅಯೋಗ್ಯ’ ಖ್ಯಾತಿಯ ಮಹೇಶ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್ ನಿರ್ವಿುಸಿದ್ದಾರೆ. ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಸದ್ಯ ಬಿಡುಗಡೆ ಆಗಿರುವ ಹಾಡಿಗೆ ಕಿನ್ನಾಳ ರಾಜ್ ಸಾಹಿತ್ಯ ಬರೆದರೆ, ಸಂತೋಷ್ ವೆಂಕಿ ಧ್ವನಿ ನೀಡಿದ್ದಾರೆ. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.