ಡಬ್ಬಿಂಗ್ ಮುಗಿಸಿದ ಮಾಫಿಯಾ; ನವೆಂಬರ್‌ಗೆ ಬರಲಿದೆ ಪ್ರಜ್ವಲ್, ಅದಿತಿ ಅಭಿನಯದ ಚಿತ್ರ

mafia
Published on

ಬೆಂಗಳೂರು: ಪ್ರಜ್ವಲ್ ದೇವರಾಜ್ ನಾಯಕನಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ‘ಮಾಫಿಯಾ’. ಇದೊಂದು ಆ್ಯಕ್ಷನ್ ಚಿತ್ರವಾಗಿದ್ದು ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರದಲ್ಲಿ ಐದು ಭರ್ಜರಿ ಸಾಹಸ ಸನ್ನಿವೇಶಗಳಿದ್ದು, ಪ್ರಜ್ವಲ್ ದೇವರಾಜ್ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿವೆ. ಜತೆಗೆ ಪಾಂಡಿಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಮುಖ್ಯ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಜತೆಗೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಬಣ್ಣ ಹಚ್ಚಿದ್ದಾರೆ.

ಸದ್ಯ ‘ಮಾಫಿಯಾ’ ಚಿತ್ರದ ಡಬ್ಬಿಂಗ್ ಭಾಗ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ. ಇದೇ ತಿಂಗಳು ಚಿತ್ರದ ಟೀಸರ್ ರಿಲೀಸ್ ಆಗಲಿದ್ದು, ನವೆಂಬರ್ ಅಂತ್ಯದಲ್ಲಿ ಚಿತ್ರವನ್ನು ರಿಲೀಸ್ ಮಾಡುವ ಆಲೋಚನೆ ಚಿತ್ರತಂಡದ್ದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net