'ಮಾಫಿಯಾ' ಚಿತ್ರೀಕರಣ ಮುಕ್ತಾಯ; ಜೂನ್​ನಲ್ಲಿ ಬಿಡುಗಡೆ

Mafia
Published on

ಬೆಂಗಳೂರು: ಪ್ರಜ್ವಲ್​ ದೇವರಾಜ್​ ಅಭಿನಯದ 'ಮಾಫಿಯಾ' ಚಿತ್ರದ ಚಿತ್ರೀಕರಣ ಕಳೆದ ವರ್ಷದ ಆರಂಭದಲ್ಲೇ ಪ್ರಾರಂಭವಾಗಿತ್ತು. ಇದೀಗ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್​ನಲ್ಲಿ 60 ದಿನಗಳ ಕಾಲ ಚಿತ್ರೀಕರಣ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರೀಕರಣ ಮುಗಿಸಿದೆ.

'ಮಾಫಿಯಾ' ಒಂದು ಆಕ್ಷನ್​ ಥ್ರಿಲ್ಲರ್​ ಚಿತ್ರವಾಗಿದ್ದು, ಪ್ರಜ್ವಲ್​ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಅವರ ನಟನೆಯ 35ನೇ ಚಿತ್ರವಾಗಿದ್ದು, ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ನಿರ್ದೇಶಕ ಲೋಹಿತ್​.

ಈ ಚಿತ್ರದಲ್ಲಿ ಐದು ಫೈಟ್​ಗಳಿದ್ದು, ವಿನೋದ್, ರಿಯಲ್ ಸತೀಶ್, ಡಿಫರೆಂಟ್ ಡ್ಯಾನಿ ಹಾಗೂ ಜಾಲಿ ಬಾಸ್ಟಿನ್ ಸಾಹಸ ಸಂಯೋಜನೆ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ 10 ದಿನಗಳ ಕಾಲ ನಡೆದಿದ್ದು, ಇದು ಚಿತ್ರದ ಹೈಲೈಟ್​ ಎನ್ನುತ್ತಾರೆ ಲೋಹಿತ್​.

ಕುಮಾರ್​ ಫಿಲಂ ಫ್ಯಾಕ್ಟರಿಯಡಿ ಬೆಂಗಳೂರು ಕುಮಾರ್​ ನಿರ್ಮಿಸಿರುವ ಈ ಚಿತ್ರಕ್ಕೆ ಅನೂಪ್​ ಸೀಳಿನ್​ ಸಂಗೀತ ಸಂಯೋಜಿಸಿದರೆ, ಎಸ್​. ಪಾಂಡಿಕುಮಾರ್​ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಪೋಸ್ಟರ್​ ಪ್ರೊಡಕ್ಷನ್​ ಹಂತದಲ್ಲಿರುವ ಈ ಚಿತ್ರವು ಜೂನ್​ನಲ್ಲಿ ಬಿಡುಗಡೆಯಾಗಲಿದೆ.

'ಮಾಫಿಯಾ' ಚಿತ್ರದಲ್ಲಿ ಪ್ರಜ್ವಲ್​ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ಮಿಕ್ಕಂತೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರರು ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net