ಹೊಸಬರ 'ಲವ್' ಈ ವಾರ ರಿಲೀಸ್​ಗೆ ಸಿದ್ಧವಾಗಿರುವ ಸಿನಿಮಾ

love
Published on

ಬೆಂಗಳೂರು: ಮಹೇಶ್ ನಿರ್ದೇಶನ ಮಾಡಿರುವ ವೃಷಾ ಪಟೇಲ್ ಹಾಗೂ ಪ್ರಜಯ್ ಜಯರಾಮ್ ಅಭಿನಯಿಸಿರುವ ಲವ್‌ ಸಿನಿಮಾ ಇದೇ ತಿಂಗಳ 6ರಂದು ಬಿಡುಗಡೆಯಾಗುತ್ತಿದೆ. ಇದು ಮಹೇಶ್ ಅವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್​ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.

ನೈಜ ಘಟನೆಯ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ, ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಸಿದ್ದಾರ್ಥ್ ಎಚ್​.ಆರ್. ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಶಿವಪ್ರಸಾದ್ ಹಿನ್ನೆಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net