ಚಿತ್ರೋತ್ಸವದ ಹಣವನ್ನು ಕಾರ್ಮಿಕರಿಗೆ ಕೊಡಲು ಮಂಸೋರೆ ಮನವಿ

Mansore - Final
Published on

ಬೆಂಗಳೂರು: ಕೋವಿಡ್‌ ಮತ್ತು ಲಾಕ್​ಡೌನ್​ನಿಂದ  ಇಡೀ ರಾಜ್ಯ ದೇಶ ತತ್ತರಿಸಿದೆ. ಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಆರ್ಥಿಕ ಭದ್ರತೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಸರ್ಕಾರ ಮೀಸಲಿಟ್ಟಿರುವ ಹಣವನ್ನು ಚಿತ್ರರಂಗದ ಕಾರ್ಮಿಕರಿಗೆ ಕೊಡಬೇಕು ಎಂದು ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.

ಕನ್ನಡ ಚಲನಚಿತ್ರರಂಗದ ಕಾರ್ಮಿಕರಿಗೆ ಸರ್ಕಾರವು ವಿಶೇಷ ಪ್ಯಾಕೇಜ್​ ಕೊಡಬೇಕು ಎಂದು ಇತ್ತೀಚೆಗಷ್ಟೇ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್​ ಪುರಾಣಿಕ್​, ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ವಿಶೇಷ ಪ್ಯಾಕೇಜ್​ಗಾಗಿ ಕಾಯದೇ, ಈ ವರ್ಷ ನಡೆಯಬೇಕಿದ್ದ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಅದಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಕಾರ್ಮಿಕರಿಗೆ ವಿತರಿಸುವುದು ಹೆಚ್ಚು ಅರ್ಥಪೂರ್ಣ ಎಂದು ಮಂಸೋರೆ ಹೇಳಿದ್ದಾರೆ.

ಕೋವಿಡ್ ಕಾರಣದಿಂದ ಈಗಾಗಲೇ ಸಾಕಷ್ಟು ಜನ ತೀರಿಕೊಂಡಿದ್ದಾರೆ. ಮುಂದೆ ಜೀವನ ಹೇಗೋ ಎಂದು ನೂರಾರು ಕುಟುಂಬಗಳು ಕಂಗಾಲಾಗಿವೆ. ಇಂತಹ ಸಂದರ್ಭಗದಲ್ಲಿ ಚಿತ್ರೋತ್ಸವಕ್ಕಿಂತ ಜೀವಗಳನ್ನು ಕಾಪಾಡಿಕೊಳ್ಳುವುದು ಆದ್ಯತೆಯಾಗಲಿ ಎಂಬುದು ನನ್ನ ಕೋರಿಕೆ ಎಂದು ಮಂಸೋರೆ ಹೇಳಿದ್ದಾರೆ.

2021ನೇ ಸಾಲಿನ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಮಂಸೋರೆ ನಿರ್ದೇಶನದ ಆಕ್ಟ್-1978 ಚಿತ್ರವನ್ನು ಸ್ಪರ್ಧೆಗೆ ಕಳುಹಿಸಲಾಗಿದೆ. ಹಾಗಿದ್ದರೂ ತಮಗೆ ಚಿತ್ರೋತ್ಸವ ರದ್ದಾಗುವುದರ ಬಗ್ಗೆ ಯಾವ ಬೇಸರವೂ ಇಲ್ಲಾ ಎಂದು ಮಂಸೋರೆ ಹೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net