

ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್ ನಟ ವಿಶಾಲ್ ನಟನೆಯ 'ಮಾರ್ಕ್ ಆಂಟೋನಿ' ಚಿತ್ರದ ಒಟಿಟಿ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕನ್ನು ಇದೀಗ ಅಧಿಕೃತವಾಗಿ ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಪಡೆದುಕೊಂಡಿದೆ.
ಇದನ್ನೂ ಓದಿ: ಗುಂಡಿ ರಸ್ತೆಯಲ್ಲಿ ಸವಾರರ ಸರ್ಕಸ್
ವಿಶಾಲ್ ಮತ್ತು ಎಸ್.ಜೆ. ಸೂರ್ಯ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಿತ್ರದಲ್ಲಿ ರಿತು ವರ್ಮಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಧಿಕ್ ರವಿಚಂದ್ರನ್ ನಿರ್ದೇಶನದ 'ಮಾರ್ಕ್ ಆಂಟೋನಿ' ಚಿತ್ರ ಇದೇ ಸೆಪ್ಟೆಂಬರ್ 15 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನಾವರಣಗೊಂಡಿದ್ದು, ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ.
ಎಸ್. ವಿನೋದ್ ಕುಮಾರ್ ನಿರ್ಮಾಣದ 'ಮಾರ್ಕ್ ಆಂಟೋನಿ'ಗೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ವಿಶಾಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇದೀಗ ನಟನ ಅಭಿಮಾನಿಗಳು ಬಿಡುಗಡೆಗೆ ತೀವ್ರ ಕುತೂಹಲ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).