

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾ ರಾಜ್ ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಒಂಬತ್ತು ತಿಂಗಳ ತುಂಬು ಗರ್ಭಿಣಿ ಆಗಿರುವ ಮೇಘನಾರ ಹರಿಗೆ ದಿನಾಂಕ ಹತ್ತಿರ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ತಂದೆ ಸುಂದರ್ ರಾಜ್ ಮತ್ತು ತಾಯಿ ಪ್ರಮಿಳಾ ಜೋಶಿ ಜೊತೆಯಲ್ಲಿ ಇದ್ದಾರೆ.
ಸ್ವತಃ ಸುಂದರ್ ರಾಜ್ ಅವರು ಕಾರು ಚಾಲನೆ ಮಾಡಿಕೊಂಡು ಮಗಳನ್ನು ಕೆಆರ್ ರಸ್ತೆಯಲ್ಲಿ ಇರುವ ಅಕ್ಷ ಆಸ್ಪತ್ರೆಗೆ ಕರೆತಂದಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಮೇಘನಾ ಚಿಕಿತ್ಸೆ ಪಡೆಯುತ್ತಿದ್ದು, ಅಕ್ಷ ಅಸ್ಪತ್ರೆಗೆ ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಜತೆ ಆಗಮಿಸಿದ್ದಾರೆ. (ದಿಗ್ವಿಜಯ ನ್ಯೂಸ್)