ಹಣದ ಮಹತ್ವ ಸಾರುವ ಚಿತ್ರದಲ್ಲೊಂದು ಇಂಪಾದ ಹಾಡು ....

Rupayi (2)
Published on

ಬೆಂಗಳೂರು: ವಿಜಯ್​ ಜಗದಾಲ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ 'ರೂಪಾಯಿ' ಚಿತ್ರವು ಸದ್ದಿಲ್ಲದೆ ಮುಗಿದು, ಬಿಡುಗಡೆಯಅಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಉತ್ಸವ್ ಗೊನ್ವಾರ್ ಬರೆದಿರುವ 'ಕರೆಯದೆ' ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆನಂದ್ ರಾಜ ವಿಕ್ರಮ್ ಸಂಗೀತ ನೀಡಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಅನನ್ಯ ಭಟ್ ಹಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ವಿಜಯ್​, 'ನಾನು ಮೂಲತಃ ರಂಗಭೂಮಿಯವನು. ನಟನಾಗಬೇಕೆಂಬ ಕನಸು ಹೊತ್ತು ಬಂದವನು. ನಿರ್ಮಾಪಕರಿಗೆ ನನ್ನ ಕನಸನ್ನು ತಿಳಿಸುವ ಸಲುವಾಗಿ ಮೂರುಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಪ್ರಮೋಷನಲ್ ವಿಡಿಯೋ ಮಾಡಿ ತೋರಿಸಿದೆ. ಈ ವಿಡಿಯೋ ಇಷ್ಟಪಟ್ಟ ಮಂಜುನಾಥ್ ಹಾಗೂ ಹರೀಶ್ ಹಣಹೂಡಲು ಮುಂದಾದರು. ಆನಂತರ ಚಿತ್ರ ಆರಂಭವಾಯಿತು. ಹೆಸರೇ ಹೇಳುವಂತೆ ಹಣದ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್ ಎಲ್ಲವೂ ಇದೆ' ಎನ್ನುತ್ತಾರೆ.

ಈ ಚಿತ್ರವು ಐದು ಪ್ರಮುಖ ಪಾತ್ರಗಳ ಸುತ್ತ ಸುತ್ತುತ್ತದಂತೆ. ವಿಜಯ್​ ಜಗದಾಲ್​ ಜತೆಗೆ ಕೃಷಿ ತಾಪಂಡ, ಯಶ್ವಿಕ್, ಚಂದನ ರಾಘವೇಂದ್ರ ಹಾಗೂ ರಾಮ ಚಂದನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನವೆಂಬರ್​ನಲ್ಲಿ ರಾಜ್ಯಾದ್ಯಂತ ಈ ಚಿತ್ರ ತೆರೆಗೆ ಬರುವುದಕ್ಕೆ ಸಜ್ಜಾಗಿದೆ. ಈ ಚಿತ್ರಕ್ಕೆ ಆರ್​.ಡಿ. ನಾಗಾರ್ಜುನ ಅವರ ಛಾಯಾಗ್ರಹಣ ಮತ್ತು ಶಿವರಾಜ್ ಮೇಹು ಸಂಕಲನವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net